ತುಮಕೂರು: ಬದುಕಿನಲ್ಲಿ ಎದುರಾಗುವ ಸವಾಲುಗಳು ಸಾಧನೆಯ ಹಾದಿಗೆ ಅಡ್ಡಿಯಾಗಬಾರದು ಎಂದು ಭಾರತ ಅಂಧ ಮಹಿಳಾ ಕ್ರಿಕೆಟ್ ಪಟು ಟಿ.ಸಿ.ದೀಪಿಕಾ ಸಲಹೆ ಮಾಡಿದರು.

ವಿಶ್ವವಿದ್ಯಾಲಯದಲ್ಲಿ ಶುಕ್ರವಾರ ಯೋಗ ಅಧ್ಯಯನ ಮತ್ತು ಸಂಶೋಧನಾ ವಿಭಾಗ, ವಿಜ್ಞಾನ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ಸಹಯೋಗದಲ್ಲಿ ಆಯೋಜಿಸಿದ್ದ ಯೋಗ ಮತ್ತು ಮಹಿಳಾ ಸಬಲೀಕರಣ ಕುರಿತ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.

ಕಷ್ಟ–ಸುಖ, ನೋವು– ನಲಿವು ಬದುಕಿನ ಸಹಜ ಪ್ರಕ್ರಿಯೆಗಳು. ಯಾವುದಕ್ಕೂ ಕುಗ್ಗದೆ ಮುಂದೆ ಸಾಗಬೇಕು ಎಂದರು. ತಮ್ಮ ಜೀವನದ ಕಹಿ ಘಟನೆ ಮೆಲುಕು ಹಾಕಿದರು. ಒಂದು ಹೊತ್ತಿನ ಊಟಕ್ಕೂ ಪರದಾಡಿದ ದಿನಗಳು, ತಾವು ಎದುರಿಸಿದ ಕಷ್ಟಗಳನ್ನು ಸ್ಮರಿಸಿದರು.

ಯೋಗ ತರಬೇತುದಾರರಾದ ಎಸ್.ಪಿ.ನಂದಿನಿ, ‘ಯೋಗ ಒಂದು ಸ್ಪರ್ಧೆ, ಫ್ಯಾಷನ್ ಅಲ್ಲ. ಪ್ರತಿಯೊಬ್ಬರ ಜೀವನದ ಅವಿಭಾಜ್ಯ ಅಂಗವಾಗಬೇಕು. ಮಾನಸಿಕ ಸ್ಥಿರತೆ, ಏಕಾಗ್ರತೆ ಹಾಗೂ ದೈಹಿಕ ಸಾಮರ್ಥ್ಯ ಹೆಚ್ಚಿಸಲು ಪೂರಕವಾಗಿದೆ. ಆಧುನಿಕ ಔಷಧಿಗಳ ಮೇಲಿನ ಅವಲಂಬನೆ ತಗ್ಗಿಸಿ ಆರೋಗ್ಯ ಸುಧಾರಿಸುತ್ತದೆ’ ಎಂದರು.

ವಿ.ವಿ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು, ವಿಜ್ಞಾನ ಕಾಲೇಜು ಪ್ರಾಂಶುಪಾಲ ಪ್ರೊ.ಎಸ್.ಶ್ರೀನಿವಾಸ, ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಎ.ಎಂ.ಮಂಜುನಾಥ್, ಸಂಚಾಲಕರಾದ ಕೆ.ಎನ್.ಚೇತನ್ ಪ್ರತಾಪ್, ಮಂಗಳಗೌರಿ, ಅನಿತಾ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260328-17-294752994

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.