ನೀರಾವರಿಗಾಗಿ ₹ 1 ಲಕ್ಷ ಕೋಟಿ ಮೀಸಲಿಡಿ; ಸಿದ್ದರಾಮಯ್ಯ

ಮಂಗಳವಾರ, ಮೇ 21, 2019
23 °C

ನೀರಾವರಿಗಾಗಿ ₹ 1 ಲಕ್ಷ ಕೋಟಿ ಮೀಸಲಿಡಿ; ಸಿದ್ದರಾಮಯ್ಯ

Published:
Updated:

ವಿಜಯಪುರ: ‘ರಾಜ್ಯದಲ್ಲಿನ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಐದು ವರ್ಷದ ಅವಧಿಯಲ್ಲಿ ₹ 1 ಲಕ್ಷ ಕೋಟಿ ಮೀಸಲಿಡುವಂತೆ ಸಮ್ಮಿಶ್ರ ಸರ್ಕಾರಕ್ಕೆ ಒತ್ತಡ ಹಾಕುವೆ’ ಎಂದು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ತಿಳಿಸಿದರು.

‘ಸಮ್ಮಿಶ್ರ ಸರ್ಕಾರದ ಕನಿಷ್ಠ ಸಾಮಾನ್ಯ ಕಾರ್ಯಕ್ರಮದಲ್ಲಿ ನೀರಾವರಿಗೂ ಆದ್ಯತೆ ನೀಡಲಿದ್ದೇವೆ. ಯುಕೆಪಿ ಕಾಮಗಾರಿ ಪೂರ್ಣಗೊಳಿಸಲು ಈ ಭಾಗದ ಸಚಿವರಾದ ಶಿವಾನಂದ ಪಾಟೀಲ, ಎಂ.ಬಿ.ಪಾಟೀಲ ಜತೆ ನಾನಿರುವೆ’ ಎಂದು ಭಾನುವಾರ ನಗರದಲ್ಲಿ ನಡೆದ ಕಿತ್ತೂರ ರಾಣಿ ಚನ್ನಮ್ಮ ಸಮುದಾಯ ಭವನದ ಉದ್ಘಾಟನಾ ಸಮಾರಂಭದಲ್ಲಿ ಹೇಳಿದರು.

ಇದಕ್ಕೂ ಮುನ್ನ ಮಾತನಾಡಿದ ಗೃಹ ಸಚಿವ ಎಂ.ಬಿ.ಪಾಟೀಲ ‘ಕೃಷ್ಣಾ ಮೇಲ್ದಂಡೆ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ಕೊಡಿಸುವಂತೆ ಆಗಾಗ್ಗೆ ನಮ್ಮ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರಾದ ಸಿದ್ದರಾಮಯ್ಯ ಬಳಿ ಕೇಳುತ್ತಿರುತ್ತೇವೆ’ ಎಂದಿದ್ದರು.

ರಾಜಕೀಯಕ್ಕಾಗಿ ವಿರೋಧ: ‘ಆಡಿಯೊ ಪ್ರಕರಣವನ್ನು ಈಗಾಗಲೇ ಎಸ್‌ಐಟಿ ತನಿಖೆಗೆ ವಹಿಸಲಾಗಿದೆ. ಸಂವಿಧಾನದ ಮೇಲೆ ಬಿಜೆಪಿಗೆ ನಂಬಿಕೆಯೇ ಇಲ್ಲ. ರಾಜಕೀಯಕ್ಕಾಗಷ್ಟೇ ವಿರೋಧಿಸುತ್ತಿದ್ದಾರೆ’ ಎಂದು ಸಿದ್ದರಾಮಯ್ಯ ಮಾಧ್ಯಮದವರ ಬಳಿ ಪ್ರತಿಕ್ರಿಯಿಸಿದರು.

‘ನಾನು ಮುಖ್ಯಮಂತ್ರಿಯಿದ್ದಾಗ ಹಲವು ಪ್ರಕರಣಗಳನ್ನು ಕೇಂದ್ರದ ಸಿಬಿಐ ತನಿಖೆಗೆ ನೀಡಿದ್ದೆ. ಎಸ್‌ಐಟಿ ತನಿಖೆಗೆ ಬಿಜೆಪಿಗರು ಹಿಂಜರಿಯುತ್ತಿರುವುದು ಏಕೆ’ ಎಂದು ಪ್ರಶ್ನಿಸಿದರು.

‘ಬಿಜೆಪಿ ನಾಯಕರು ಚರ್ಚೆ ನಡೆಸಬೇಕಾದ ಸ್ಥಳದಲ್ಲಿ ಮಾತನಾಡಲ್ಲ. ಆಧಾರ ರಹಿತವಾಗಿ ಎಲ್ಲೆಡೆ ಬೊಬ್ಬೆ ಹೊಡೆಯುತ್ತಾರೆ. ಭೀಕರ ಬರವಿದ್ದರೂ ಬಜೆಟ್‌ ಅಧಿವೇಶನ ನಡೆಸೋದು ಅವರಿಗೆ ಬೇಕಿರಲಿಲ್ಲ’ ಎಂದು ಹರಿಹಾಯ್ದರು.

‘ನಾಲ್ವರು ಶಾಸಕರನ್ನು ಅನರ್ಹಗೊಳಿಸುವಂತೆ ಸಭಾಧ್ಯಕ್ಷರಿಗೆ ಸಲ್ಲಿಸಿರುವ ಮನವಿ ವಿಷಯದಲ್ಲಿ, ಸಭಾಧ್ಯಕ್ಷರೇ ನಿರ್ಧಾರ ತೆಗೆದುಕೊಳ್ಳುತ್ತಾರೆ. ಬೆಳಗಾವಿಯಲ್ಲಿನ ವಿಟಿಯು ವಿಭಜನೆಗೆ ನನ್ನ ವಿರೋಧವಿದೆ’ ಎಂದು ಸಿದ್ದರಾಮಯ್ಯ ಪ್ರಶ್ನೆಗಳಿಗೆ ಉತ್ತರಿಸಿದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 7

  Happy
 • 0

  Amused
 • 1

  Sad
 • 0

  Frustrated
 • 3

  Angry

Comments:

0 comments

Write the first review for this !