ಬುಧವಾರ, ಏಪ್ರಿಲ್ 14, 2021
29 °C

ರಾಜೀನಾಮೆ ಸಚಿವರ ಅಣಕು: ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಲ್ಬರ್ಗ: ಸ್ವ ಹಿತಾಸಕ್ತಿಗಾಗಿ ಸಚಿವ ಪದವಿಗೆ ರಾಜೀನಾಮೆ ನೀಡಿದ್ದ ಸಚಿವರ ಮುಖವಾಡ ಧರಿಸಿ ಅಣಕು ಪ್ರದರ್ಶನ ಮಾಡುವ ಮೂಲಕ ಕನ್ನಡ ಜಾಗೃತಿ ವೇದಿಕೆ ಸದಸ್ಯರು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.ಅಭಿವೃದ್ಧಿ, 371ನೇ ವಿಧಿ ಜಾರಿ ಮತ್ತಿತರ ಜನಪರ ವಿಚಾರಗಳು ಬಂದಾಗ ಮಾತನಾಡದ, ಬರ ಬಂದರೂ ಬಂದು ಪರಿಹಾರಕ್ಕೆ ಯತ್ನಿಸದ ಬಿಜೆಪಿಯ 10 ಸಚಿವರು ಸ್ವಹಿತಕ್ಕಾಗಿ ಮುಖ್ಯಮಂತ್ರಿ ಬದಲಾಯಿಸಲು ರಾಜೀನಾಮೆ ನೀಡಿದ್ದಾರೆ. ಬಿಜೆಪಿ ರಾಜ್ಯದಲ್ಲಿ ಆಡಳಿತಕ್ಕೆ ಬಂದ ಬಳಿಕ ಸ್ವಹಿತಕ್ಕಾಗಿ ಆಡಳಿತ ಹಾಗೂ ಜನರನ್ನು ಬಲಿಕೊಡುವ ಪರಿಪಾಠ ಬೆಳೆದು ಬಂದಿದೆ.ಅಲ್ಲದೇ ತಮಗೆ ಬೇಕಾದ ವ್ಯಕ್ತಿಯನ್ನು ಆರಿಸಿ ಸಿಎಂ ಸ್ಥಾನದಲ್ಲಿ ಕೂರಿಸುವ ಕುತಂತ್ರ ನಡೆಯುತ್ತಿದೆ. ಇದರಿಂದ ರಾಜ್ಯದ ಅಭಿವೃದ್ಧಿ ಕುಂಠಿತಗೊಂಡಿದೆ. ರಾಜ್ಯದ ಇತ್ತೀಚೆಗಿನ ಬೆಳವಣಿಗೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿರುವುದಾಗಿ ವೇದಿಕೆ ಜಿಲ್ಲಾ ಅಧ್ಯಕ್ಷ ದೇವೀಂದ್ರ ದೇಸಾಯಿ ಕಲ್ಲೂರ ತಿಳಿಸಿದರು.ಲೋಕೇಶ ಶೀಲವಂತ, ಸಂತೋಷ ಅಣವೇಕರ್, ಶರಣು ಕನ್ಣಿ, ಗುಂಡು, ಓಂಕಾರ ಕಲ್ಲೂರ, ರಾಘು, ಕುಮಾರ, ಈರಣ್ಣ, ಪ್ರತಾಪ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.