ಸೋಮವಾರ, ಏಪ್ರಿಲ್ 19, 2021
28 °C

ಬಿಜೆಪಿ ಸರ್ಕಾರ ರಾಜೀನಾಮೆಗೆ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ರಾಜ್ಯದ ಬಿಜೆಪಿ ಸರ್ಕಾರ ರಾಜೀನಾಮೆ ನೀಡಬೇಕು ಹಾಗೂ ರಾಜ್ಯದಲ್ಲಿ ಸಂವಿಧಾನ ಬಿಕ್ಕಟ್ಟಿಗೆ ರಾಜ್ಯಪಾಲರು ಮಧ್ಯಪ್ರವೇಶಿಸಬೇಕು ಎಂದು ಸಿಪಿಐಎಂ ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು.ಈ ಬಗ್ಗೆ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ರಾಜ್ಯದ ಬಿಜೆಪಿ ಸರ್ಕಾರ ಅಂತರಿಕ ಕಲಹದಿಂದಾಗಿ 9ಜನ ಸಚಿವರು ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಸಂವಿಧಾನ ಬಿಕ್ಕಟ್ಟು ಉಂಟಾಗಿದೆ ಎಂದು ಆರೋಪಿಸಿದರು.ಮುಖ್ಯಮಂತ್ರಿಗಳು ಈಗಾಗಲೇ 19 ಇಲಾಖೆಗಳ ಉಸ್ತುವಾರಿಯನ್ನು ನೋಡುತ್ತಿದ್ದರು. ಆದರೆ, 9ಜನ ಸಚಿವರ ರಾಜೀನಾಮೆಯಿಂದ 33 ಖಾತೆಗಳನ್ನು ನೋಡಿಕೊಳ್ಳಬೇಕಾಗಿದೆ. ಹಿಂದೆ ಕೆಲ ಸಚಿವರು ನೀಡಿದ ರಾಜೀನಾಮೆ ಯಿಂದ ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇಲ್ಲದಂತಾಗಿದೆ ಎಂದು ಟೀಕಿಸಿದರು.ಜನರ ಸಮಸ್ಯೆಗಳಿಗೆ ಸ್ಪಂದಿಸುವವರಿಲ್ಲ. ಬರಗಾಲಕ್ಕೆ ತುತ್ತಾದ ಜನರಿಗೆ ಇದುವರೆಗೂ ಪರಿಹಾರ ನೀಡಿಲ್ಲ.ಮಳೆ ಅಭಾವದಿಂದ ರೈತರು ಸಂಕಷ್ಟದಲ್ಲಿದ್ದಾರೆ. ಆದರೆ, ಸರ್ಕಾರ ಕ್ರಮ ಕೈಗೊಂಡಿಲ್ಲ ಎಂದು ಆಪಾದಿಸಿದರು.ಮಳೆ ಅಭಾವದಿಂದ ರಾಜ್ಯದ ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಜನಸಾಮಾನ್ಯರು ಎದುರಿಸುತ್ತಿದ್ದಾರೆ. ಸರ್ಕಾರ ಗಮನಹರಿಸಿಲ್ಲ ಎಂದು ತಿಳಿಸಿದರು.ಬಿಜೆಪಿ ಸರ್ಕಾರ ಕೂಡಲೇ ರಾಜೀನಾಮೆ ನೀಡಬೇಕು, ರಾಜ್ಯದಲ್ಲಿ ಸಂವಿಧಾನ ಬಿಕ್ಕಟ್ಟಿಗೆ ರಾಜ್ಯಪಾಲರು ಮಧ್ಯ ಪ್ರವೇಶಿಸಬೇಕು ಎಂದು ಸಿಪಿಐಎಂ ಜಿಲ್ಲಾ ಘಟಕದ ಕಾರ್ಯದರ್ಶಿ ಮಲ್ಲಯ್ಯ ಜಾಲಹಳ್ಳಿ ಅವರು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ ತಿಳಿಸಿದ್ದಾರೆ.ಡಿ.ಎಸ್ ಶರಣಬಸವ, ಎಚ್.ಪದ್ಮಾ, ಕೆ.ಜಿ ವೀರೇಶ, ವರಲಕ್ಷ್ಮಿ, ನಾರಾಯಣ, ವೆಂಕಟಸ್ವಾಮಿ,ಪಾರ್ವತಿ, ಶ್ರೀಧರ, ಚೆನ್ನಬಸಯ್ಯ, ವೈ,ಈರಣ್ಣ, ಪಂಪಣ್ಣ, ರವಿ, ಶರಣಗೌಡ, ಸಾಬಣ್ಣ, ಮಹಾಂತಗೌಡ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.