ಗುರುವಾರ , ನವೆಂಬರ್ 21, 2019
21 °C

105 ಯೂನಿಟ್ ರಕ್ತ ಸಂಗ್ರಹ

Published:
Updated:
Prajavani

ಚಿಕ್ಕಬಳ್ಳಾಪುರ: ಬಿಜಿಎಸ್‌ ನಿರ್ವಹಣಾ ಅಧ್ಯಯನ ಸಂಸ್ಥೆಯಲ್ಲಿ ಬುಧವಾರ ಭಾರತೀಯ ರೆಡ್‌ಕ್ರಾಸ್ ಜಿಲ್ಲಾ ರಕ್ತನಿಧಿ ಸಹಯೋಗದಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.

ಶಿಬಿರದಲ್ಲಿ 105 ಯೂನಿಟ್ ರಕ್ತ ಸಂಗ್ರಹಿಸಲಾಯಿತು. ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ವೈದ್ಯ ಡಾ.ಹೇಮಂತ್ ರಾಜ್ ಸಾವಳಗಿ, ಸಂಯೋಜಕ ಭರತ್, ಕಾಲೇಜಿನ ಪ್ರಾಂಶುಪಾಲ ಪ್ರೊ.ವೆಂಕಟೇಶ್ ಬಾಬು, ಯುವ ರೆಡ್‌ಕ್ರಾಸ್‌ ಘಟಕದ ಸಂಯೋಜನಾಧಿಕಾರಿ ಪ್ರೊ.ರವಿಚಂದ್ರ ಶಿಬಿರದಲ್ಲಿ ಭಾಗವಹಿಸಿದ್ದರು.

ಪ್ರತಿಕ್ರಿಯಿಸಿ (+)