ಭಾನುವಾರ, ಮೇ 22, 2022
24 °C

ವಿಟಿಯು ಕುಲಪತಿ ವಜಾಕ್ಕೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಲ್ಬರ್ಗ: ಮೌಲ್ಯಮಾಪನದಲ್ಲಿ ಅವ್ಯವಹಾರಗಳ ಗೂಡಾಗಿರುವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (ವಿಟಿಯು) ಕುಲಪತಿ ಡಾ.ಮಹೇಶಪ್ಪ ಅವರನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿ ಗುರುವಾರ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ವಿವಿಯಲ್ಲಿ 25 ಸಾವಿರದಿಂದ ಒಂದು ಲಕ್ಷ ರೂಪಾಯಿ ತನಕ ಹಣ ನೀಡಿದರೆ ಮರುಮೌಲ್ಯಮಾಪನದಲ್ಲಿ ತೇರ್ಗಡೆ ಹೊಂದಬಹುದಾಗಿದೆ.

 

ಇಂತಹ ದಂಧೆ ವ್ಯಾಪಕವಾಗಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು ಕಾಲೇಜೊಂದರ ಪ್ರಾಂಶುಪಾಲರಾಗಿದ್ದ ಡಾ.ಮಹೇಶಪ್ಪ ಅವರು ಕುಲಪತಿಗಳಾದದ್ದು ಹೇಗೆ ಎಂದು ಪ್ರಶ್ನಿಸಿದ್ದಾರೆ. ಕುಲಪತಿ ಆಗುವ ಮೊದಲು ಕೆಲವು ಸಂಶೋಧನಾ ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿ ಕಾರ್ಯ ನಿರ್ವಹಿಸಿರಬೇಕು. ಅಂತರರಾಷ್ಟ್ರೀಯ ಮಟ್ಟದ ನಿಯತಕಾಲಿಕಗಳಲ್ಲಿ ಸಂಶೋಧನಾ ವರದಿಗಳನ್ನು ಪ್ರಕಟಿಸಿರಬೇಕು. ಅಂತಹ ಹಲವು ಅರ್ಹತೆಗಳನ್ನು ಮಹೇಶಪ್ಪ ಅವರು ಪೂರೈಸಿರುವ ಬಗ್ಗೆಯೇ ಅನುಮಾನಗಳಿವೆ ಎಂದು ದೂರಿದ್ದಾರೆ.

ಮಂಜುನಾಥ ಹತ್ತಿ, ಪಾಂಡುರಂಗ, ಮಲಶೆಟ್ಟಿ, ರಾಜು ಗುತ್ತೇದಾರ, ಸ್ವಾಮಿ, ಶೇಷಾದ್ರಿ ಮತ್ತಿತರರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.