ಭಾನುವಾರ, ಏಪ್ರಿಲ್ 11, 2021
26 °C

ಟಾಕಳಿ: ಪುನರ್ವಸತಿ, ಮನೆ ಹಂಚಿಕೆಗೆ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಲ್ಬರ್ಗ: ಅಫಜಲಪುರ ತಾಲ್ಲೂಕಿನ ಅತನೂರಿನ ಟಾಕಳಿ ಗ್ರಾಮ ಭೀಮಾ ನದಿ ತೀರದಲ್ಲಿರುವುದರಿಂದ ನಿವಾಸಿಗಳು ಸಂಕಷ್ಟಕ್ಕೆ ಒಳಗಾಗಿದೆ. ಗ್ರಾಮವನ್ನು ಸ್ಥಳಾಂತರಿಸಿ ಪುನರ್ವಸತಿ ಕಲ್ಪಿಸಲು ಆದೇಶವಾಗಿದ್ದರೂ ತಾರತಮ್ಯ ನಡೆಯುತ್ತಿದೆ ಎಂದು ಸಂತ್ರಸ್ತರು ವಸತಿ ಸಚಿವ ವಿ. ಸೋಮಣ್ಣ ಅವರಿಗೆ ಮನವಿ ಸಲ್ಲಿಸಿ ಸೂಕ್ತ ಕ್ರಮ ಜರುಗಿಸಲು ಒತ್ತಾಯಿಸಿದ್ದಾರೆ.

ಗುಲ್ಬರ್ಗಕ್ಕೆ ಸೋಮವಾರ ಆಗಮಿಸಿದ್ದ ಸಚಿವ ಸೋಮಣ್ಣ ಅವರಿಗೆ ಗ್ರಾಮಸ್ಥರ ಪರವಾಗಿ ಎಂ.ಡಿ.ಪಾಟೀಲ ಮನವಿ ಪತ್ರ ಸಲ್ಲಿಸಿದರು. ಟಾಕಳಿಯ  82 ಮನೆಗಳನ್ನು ಸ್ಥಳಾಂತರಿಸಿ ಪುನರ್ವಸತಿ ಕಲ್ಪಿಸಲು ಸರ್ಕಾರ ಆದೇಶಿಸಿದೆ. ಆದರೆ ಪುನರ್ವಸತಿ ಹಾಗೂ ವಸತಿ ಹಂಚಿಕೆಯಲ್ಲಿ ಸ್ಥಳೀಯ ಶಾಸಕರೊಬ್ಬರು ತಾರತಮ್ಯ ಎಸಗಿದ್ದಾರೆ ಎಂದು ದೂರಲಾಗಿದೆ.

ಈ ಹಿನ್ನೆಲೆಯಲ್ಲಿ, ಸಚಿವರು ಪುನರ್ವಸತಿ ಹಾಗೂ ಮನೆ ಹಂಚಿಕೆಗೆ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತಾಯಿಸಿದ್ದಾರೆ. ಈ ಸಂದರ್ಭದಲ್ಲಿ ಮಾಜಿ ಶಾಸಕ ಎಂ.ವೈ. ಪಾಟೀಲ, ಶಾಸಕ ಶಶೀಲ್ ನಮೋಶಿ, ಅಶೋಕ ಬಗಲಿ, ರಾಜುಗೌಡ ನಾಗನಳ್ಳಿ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.