ಶನಿವಾರ, ಏಪ್ರಿಲ್ 10, 2021
30 °C

ವಿಶೇಷ ಸೌಲಭ್ಯಕ್ಕಾಗಿ ಧರಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಲ್ಬರ್ಗ:  ಬಿಜೆಪಿ ಸರ್ಕಾರವು ದಲಿತ, ಹಿಂದುಳಿದ ಅಲ್ಪಸಂಖ್ಯಾತರಿಗೆ ಭೂಮಿ ಹಾಗೂ ಬಜೆಟ್‌ನಲ್ಲಿ ವಿಶೇಷ ಯೋಜನೆಗಳನ್ನು ಘೋಷಿಸುವಂತೆ ಆಗ್ರಹಿಸಿ ಭಾರತೀಯ ದಲಿತ ಪ್ಯಾಂಥರ್‌ನ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಧರಣಿ ನಡೆಸಿ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.ಡಾ.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಫಲಾನುಭವಿಗಳ ಆಯ್ಕೆ ಸಮಿತಿಗೆ ಶಾಸಕರ ಅಧಿಕಾರ ರದ್ದುಪಡಿಸಿ ಜಿಲ್ಲಾಧಿಕಾರಿ ಮುಖಾಂತರ ಆಯ್ಕೆ ಮಾಡಬೇಕು, ಡಾ.ಅಂಬೇಡ್ಕರ್ ಅಭಿವೃದ್ಧಿ ನಿಗಮಕ್ಕೆ ಹೆಚ್ಚಿನ ಅನುದಾನ ನೀಡಬೇಕು, ಕೊಳವೆ ಬಾವಿಗಳಿಗೆ ಗಂಗಾ ಕಲ್ಯಾಣ ಯೋಜನೆಯಲ್ಲಿ ಶೀಘ್ರ ವಿದ್ಯುತ್ ಸಂಪರ್ಕ ಕಲ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿಯಲ್ಲಿ  ತಿಳಿಸಲಾಗಿದೆ ಎಂದು ಜಿಲ್ಲಾ ಘಟಕದ ಅಧ್ಯಕ್ಷ ಸಿ.ಎಚ್. ಭೀಮರಾಯ ನಗನೂರು ಅವರು ತಿಳಿಸಿದರು.ವಿಭಾಗೀಯ ಅಧ್ಯಕ್ಷ ಮಿಲಿಂದ ಸನಗುಂದಿ, ಪ್ರಧಾನ ಕಾರ್ಯದರ್ಶಿ ಅಂಬಾರಾಯ ಹಡಗಿಲ್, ಜಿಲ್ಲಾ ಘಟಕದ ಉಪಾಧ್ಯಕ್ಷ ಸುರೇಶ ನೂಲಾ, ಕಲ್ಯಾಣರಾವ ಡೊಣ್ಣೂರ, ಕಾಶಿನಾಥ ಶೆಳ್ಳಗಿ, ಕಾಶಿನಾಥ ದಿವಟಗಿ, ರಾಜಕುಮಾರ ಕೀಣಗಿ, ರವಿ ಕುಳಗೇರಿ ಮತ್ತಿತರರು ಧರಣಿಯಲ್ಲಿ ಪಾಲ್ಗೊಂಡಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.