ಶುಲ್ಕ ಹೆಚ್ಚಳ: ಸರ್ಕಾರದ ಕ್ರಮಕ್ಕೆ ಆಕ್ರೋಶ

7

ಶುಲ್ಕ ಹೆಚ್ಚಳ: ಸರ್ಕಾರದ ಕ್ರಮಕ್ಕೆ ಆಕ್ರೋಶ

Published:
Updated:
ಶುಲ್ಕ ಹೆಚ್ಚಳ: ಸರ್ಕಾರದ ಕ್ರಮಕ್ಕೆ ಆಕ್ರೋಶ

ಗುಲ್ಬರ್ಗ: ಪ್ರವರ್ಗ 1, 2-ಎ, 3-ಎ ಹಾಗೂ 3-ಬಿ ಪದವಿ ವಿದ್ಯಾರ್ಥಿಗಳಿಗೆ ಶುಲ್ಕ ಹೆಚ್ಚಳ ಮಾಡಿರುವ ಸರ್ಕಾರದ ಕ್ರಮ ವಿರೋಧಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟುಡೆಂಟ್ಸ್ ಆರ್ಗನೈಸೇಶನ್ (ಎಐಡಿಎಸ್‌ಒ) ಮತ್ತು ಆಲ್ ಇಂಡಿಯಾ ಡೆಮಾಕ್ರಟಿಕ್ ಯುಥ್ ಆರ್ಗನೈಸೇಶನ್ (ಎಐಡಿವೈಒ) ಜಿಲ್ಲಾ ಸಮಿತಿ ನೇತೃತ್ವದಲ್ಲಿ ಬುಧವಾರ ಇಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಎಐಡಿಎಸ್‌ಒ ಜಿಲ್ಲಾ ಘಟಕದ ಅಧ್ಯಕ್ಷ ಜಗನ್ನಾಥ ಎಸ್.ಎಚ್., “ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳಿಂದಾಗಿ ಜೀವನಾವಶ್ಯಕ ಬೆಲೆಗಳು ಗಗನಕ್ಕೇರಿ ಕರ್ನಾಟಕದ ಜನತೆ ಬದುಕುವುದೇ ಕಷ್ಟವಾಗಿದೆ. ಪರಿಸ್ಥಿತಿ ಹೀಗಿರುವಾಗ ಪೋಷಕರು ತಮ್ಮ ಮಕ್ಕಳಿಗೆ ಶುಲ್ಕಕ್ಕಾಗಿ ಅಷ್ಟೊಂದು ಹಣ ಹೊಂದಿಸಿಕೊಡುವುದು ಹೇಗೆ” ಎಂದು ಪ್ರಶ್ನಿಸಿದರು.“ಸರ್ಕಾರಗಳು ಶುಲ್ಕ ಹೆಚ್ಚಳ ಮಾಡಿ, ಶಿಕ್ಷಣವನ್ನು ವ್ಯಾಪಾರೀಕರಣ ಮಾಡಲು ಯತ್ನಿಸುತ್ತಿವೆ. ವಿದ್ಯಾರ್ಥಿಗಳನ್ನು ಶಿಕ್ಷಣದಿಂದ ವಂಚಿಸುವ ಈ ಹುನ್ನಾರ ತಡೆಗಟ್ಟಿ, ಶುಲ್ಕ ಹೆಚ್ಚಳವನ್ನು ಸರ್ಕಾರ ಕೂಡಲೇ ಹಿಂದಕ್ಕೆ ಪಡೆಯಬೇಕು” ಎಂದು ಎಐಡಿವೈಒ ಜಿಲ್ಲಾ ಉಪಾಧ್ಯಕ್ಷ ಮಹೇಶ ಎಸ್.ಬಿ. ಆಗ್ರಹಿಸಿದರು.ಶಿಕ್ಷಣದ ವ್ಯಾಪಾರೀಕರಣ ನಿಲ್ಲಬೇಕು; ಎಲ್ಲರಿಗೂ ಉಚಿತ ಮತ್ತು ಸಮಾನ ಶಿಕ್ಷಣ ಒದಗಿಸಬೇಕು ಹಾಗೂ ಪದವಿ ವಿದ್ಯಾರ್ಥಿಗಳ ಶುಲ್ಕ ಹೆಚ್ಚಳ ನಿರ್ಧಾರ ವಾಪಸು ಪಡೆಯಬೇಕು ಎಂಬ ಬೇಡಿಕೆಗಳ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಮೂಲಕ ಉನ್ನತ ಶಿಕ್ಷಣ ಸಚಿವರಿಗೆ ರವಾನಿಸಲಾಯಿತು. ವಿವಿಧ ಕಾಲೇಜುಗಳ ವಿದ್ಯಾರ್ಥಿ- ವಿದ್ಯಾರ್ಥಿನಿಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry