ವಿದ್ಯಾರ್ಥಿ ಶುಲ್ಕ ನೀತಿ ವಿರುದ್ಧ ಪ್ರತಿಭಟನೆ

7

ವಿದ್ಯಾರ್ಥಿ ಶುಲ್ಕ ನೀತಿ ವಿರುದ್ಧ ಪ್ರತಿಭಟನೆ

Published:
Updated:

ಗುಲ್ಬರ್ಗ: ರಾಜ್ಯ ಸರ್ಕಾರವು ಶುಲ್ಕ ಪಾವತಿಗೆ ಸಂಬಂಧಿಸಿ ಜಾರಿಗೊಳಿಸಿದ ನೂತನ ನೀತಿಯನ್ನು ಖಂಡಿಸಿ ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (ಎಐಡಿಎಸ್‌ಒ) ಮತ್ತು  ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಒ) ವತಿಯಿಂದ ಗುರುವಾರ ಗುಲ್ಬರ್ಗದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಪ್ರತಿಭಟನೆ ನಡೆಯಿತು.ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತ ಬಡ ವಿದ್ಯಾರ್ಥಿಗಳಿಗೆ ಇದುವರೆಗೆ ನೀಡುತ್ತಿದ್ದ ಶುಲ್ಕಗಳ ರಿಯಾಯಿತಿಗೆ ಸಂಬಂಧಿಸಿದಂತೆ ಈ ವರ್ಷದಿಂದ ಮಾಡಿರುವ ಬದಲಾವಣೆಯನ್ನು ಹಿಂತೆಗೆದುಕೊಳ್ಳಬೇಕೆಂದು ಅವರು ಆಗ್ರಹಿಸಿದರು. ನಿಷೇಧಾಜ್ಞೆ ಹಿನ್ನೆಲೆಯಲ್ಲಿ ಪ್ರತಿಭಟನಾನಿರತ 20 ಜನರನ್ನು ಬಂಂಧಿಸಲಾಯಿತೆಂದು ತಿಳಿದುಬಂದಿದೆ.ಸಾಮಾಜಿಕ ಮತ್ತು ಆರ್ಥಿಕವಾಗಿ ಹಿಂದುಳಿದಿರುವ (ಬಿಸಿಎಂ) ವರ್ಗಗಳ ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡುವ ವಿಧಾನವನ್ನು ಬದಲಾಯಿಸಿದ ಸರ್ಕಾರದ ಆದೇಶವನ್ನು ರದ್ದುಗೊಳಿಸಬೇಕು. ಆದಾಯ ಪ್ರಮಾಣಪತ್ರ ನೀಡುವ ವಿದ್ಯಾರ್ಥಿಗಳಿಗೆಲ್ಲ ಶುಲ್ಕ ಪಾವತಿಯ ಸಮಯದಲ್ಲೇ ವಿನಾಯಿತಿ ನೀಡಬೇಕು. ಈಗಾಗಲೇ ಪೂರ್ಣ ಶುಲ್ಕ ನೀಡಿದ ಅರ್ಹ ವಿದ್ಯಾರ್ಥಿಗಳಿಗೆ ತಕ್ಷಣವೇ ಮರುಪಾವತಿ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಯಿತು.ಎಲ್ಲ ಅರ್ಹ ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯಿತಿ ಮತ್ತು ವಿದ್ಯಾರ್ಥಿ ವೇತನಕ್ಕೆ ಅವಶ್ಯಕತೆಯಿರುವಷ್ಟು ಹಣವನ್ನು ಆಯಾಯ ಶೈಕ್ಷಣಿಕ ವರ್ಷದಲ್ಲೇ  ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಲಾಯಿತು.ಎ.ಐ.ಡಿ.ಎಸ್.ಒ. ಡಾ. ಪ್ರಮೋದ್, ಜಗನ್ನಾಥ್ ಎಸ್.ಎಚ್. ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.ಭರವಸೆ

ಬಳಿಕ ಸಂಘಟನೆಗಳ ನಿಯೋಗವು ಉನ್ನತ ಶಿಕ್ಷಣ ಸಚಿವ ಸಿ.ಟಿ. ರವಿ ಅವರನ್ನು ಭೇಟಿ ಮಾಡಿದ್ದು, ಬೇಡಿಕೆಗಳ ಬಗ್ಗೆ ಸ್ಪಂದಿಸುವ ಭರವಸೆ ಲಭಿಸಿದೆ ಎಂದು ಪ್ರಕಟಣೆ ತಿಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry