ಭಾನುವಾರ, ಏಪ್ರಿಲ್ 18, 2021
33 °C

ನ್ಯಾಯ ಸಿಗುವವರೆಗೂ ಹೋರಾಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಲ್ಬರ್ಗ: ಇಲ್ಲಿನ ಖಾಸಗಿ ಶಾಲೆಯೊಂದರಲ್ಲಿ ಓದುತ್ತಿದ್ದ ವಿದ್ಯಾರ್ಥಿ ಬಿಲಾಲ್ ಮಹ್ಮದ್ ಮೈನೋದ್ದೀನ್ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಕುರಿತು ತನಿಖೆ ನಡೆಸುವಂತೆ ಒತ್ತಾಯಿಸಿ ಶುಕ್ರವಾರ ದರ್ಗಾ ರಸ್ತೆಯ ಮುಸ್ಲಿಂ ಚೌಕ್ ಬಳಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ, ಕುಲ್ ಹಿಂದ್ ತಾಮಿರೆ ಮಿಲತ್, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್, ದಲಿತ ಸೇನೆ ಹಾಗೂ ವಿವಿಧ ಸಂಘಟನೆಗಳು ರಸ್ತೆ ತಡೆ ನಡೆಸಿದವು. ಬಳಿಕ ನ್ಯಾಯ ಸಿಗುವವರೆಗೂ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಲಾಯಿತು.ಪ್ರತಿಭಟನಾಕಾರರನ್ನು ಉದ್ದೆೀಶಿಸಿ ಮಾತನಾಡಿದ ಮುಖಂಡ ಇಲಿಯಾಸ್ ಸೇಠ ಬಾಗಬಾನ್, ಈ ಸಾವು ಸಹಜ ಸಾವಲ್ಲ. ಇದರ ಬಗ್ಗೆ ಸಮಗ್ರ ತನಿಖೆಯಾಗಬೇಕು. ಇಲ್ಲಿ ಯಾವುದೇ ಜಾತಿ ಅಥವಾ ಸಮಾಜದ ಪ್ರಶ್ನೆ ಬರುವುದಿಲ್ಲ. ಮೃತಪಟ್ಟಿರುವ ಯುವಕ ವಿದ್ಯಾರ್ಥಿಯಾಗಿರುವುದರಿಂದ ವಿದ್ಯಾರ್ಥಿ ಸಮುದಾಯವೇ ಇಂತಹ ಶಿಕ್ಷಣ ಸಂಸ್ಥೆ ವಿರುದ್ಧ ಹೋರಾಟ ಮಾಡಬೇಕು ಎಂದು ಕರೆ ನೀಡಿದರು.

 

ಬಡ ಕುಟುಂಬವಾಗಿರುವ ಬಿಲಾಲ್ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡಬೇಕು. ಈ ವಿಷಯದಲ್ಲಿ ಪೊಲೀಸರೂ ನಿಷ್ಕ್ರಿಯರಾಗಿದ್ದಾರೆ ಎಂದು ದೂರಿದರು. ಬಿಲಾಲ್ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು. ದಲಿತ ಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಹನುಮಂತ ಯಳಸಂಗಿ ಮಾತನಾಡಿದರು.ಉಸ್ಮಾನ ಲಖಪತಿ, ಅಫನ್ ಸೇಠ, ಜಹಾಂಗೀರ್, ವಾಹದ್ ಬಾಬಾ, ಬಾಬಾ ಖಾನ್ ಮಾತನಾಡಿದರು. ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಮನವಿ ಸ್ವೀಕರಿಸಿದ ಎಎಸ್‌ಪಿ ಭೂಷಣ ಬೊಸರೆ, ಎಸ್ಪಿಯವರ ಗಮನಕ್ಕೆ ತಂದು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ನಂತರ ರಸ್ತೆ ತಡೆ ಹಿಂದಕ್ಕೆ ಪಡೆಯಲಾಯಿತು ಎಂದು ಪ್ರಕಟಣೆ ತಿಳಿಸಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.