ಮಂಗಳವಾರ, ಏಪ್ರಿಲ್ 13, 2021
23 °C

ಶಾಲೆ ಬಿರುಕು: ಮಕ್ಕಳಲ್ಲಿ ಆತಂಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಾಡಿ: ಪಟ್ಟಣದ ಸಮೀಪ ಇರುವ ಹಲಕಟ್ಟಿ ಗ್ರಾಮದ ದಲಿತರ ಕೇರಿಯಲ್ಲಿರುವ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಹಲವು ವರ್ಷಗಳ ಹಿಂದೆ ಕುಡಿಯುವ ನೀರಿನ ಟ್ಯಾಂಕ್ ನಿರ್ಮಾಣ ಮಾಡಲಾಗಿದೆ. ಆದರೂ ನೀರಿನ ಪೂರೈಕೆ ಇಲ್ಲ. ಶೌಚಾಲಯ ಕಟ್ಟಡ ಇದ್ದರು ಬಳಕೆ ಇಲ್ಲದಂತಾಗಿದೆ.

 

ವಿವಿಧ ಮೂಲಸೌಕರ್ಯಗಳನ್ನು ಶಾಲೆಗೆ ಒದಗಿಸಿದರೂ ಸಂಬಂಧಿಸಿದವರ ನಿರ್ಲಕ್ಷ್ಯದಿಂದ ಅವು ಉಪಯೋಗಕ್ಕೆ ಬಾರದಂತಾಗಿವೆ.  ಶಾಲಾ ಕಟ್ಟಡವೂ ಸಂಪೂರ್ಣ ಶಿಥಿಲಗೊಂಡಿದೆ. ಆದರೂ ಇಲ್ಲಿಯವರೆಗೆ ದುರಸ್ತಿ ಮಾಡಿಲ್ಲ. ಇದರಿಂದ ಮಕ್ಕಳು ಭಯದಲ್ಲೇ ಪಾಠ ಆಲಿಸುವಂಥ ಪರಿಸ್ಥಿತಿ ಇದೆ ಎಂದು (ಎಐಡಿವೈಓ) ಹಲಕಟ್ಟಿ ಗ್ರಾಮ ಘಟಕದ ಅಧ್ಯಕ್ಷ ರಾಘವೇಂದ್ರ ಅಲ್ಲಿಪೂರ್ ಆರೋಪಿಸಿದ್ದಾರೆ.ಪಟ್ಟಣದ ಸಮೀಪ ಇರುವ ಹಲಕಟ್ಟಿ ಗ್ರಾಮದ ದಲಿತರ ಕೇರಿಯಲ್ಲಿರುವ ಪ್ರಾಥಮಿಕ ಶಾಲೆಯಲ್ಲಿ 35 ಮಕ್ಕಳು ಓದುತ್ತಿದ್ದಾರೆ. ಅಲ್ಲಿ ಇಬ್ಬರು ಶಿಕ್ಷಕರು ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ ಶಾಲಾ ಆವರಣದಲ್ಲಿ ಮುಳ್ಳು ಗಿಡಗಂಟಿ ಬೆಳೆದಿವೆ.ದುಬಾರಿ ವೆಚ್ಚಮಾಡಿ ಕುಡಿಯುವ ನೀರಿನ ಟ್ಯಾಂಕ್ ನಿರ್ಮಾಣ ಮಾಡಲಾಗಿದೆ. ಆದರೆ ಇಲ್ಲಿಯವರೆಗೆ ಟ್ಯಾಂಕ್‌ಗೆ ನೀರು ಪೂರೈಕೆ ಮಾಡಿಲ್ಲ. ಇದರಿಂದ ಕುಡಿಯುವ ನೀರಿಗಾಗಿ ಮಕ್ಕಳು ದಿನನಿತ್ಯ ಪರದಾಡುತ್ತಿದ್ದಾರೆ.ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಮಕ್ಕಳ ಸಲುವಾಗಿ ಸುಸಜ್ಜಿತ ಶೌಚಾಲಯ ನಿರ್ಮಾಣ ಮಾಡಲಾಗಿದೆ. ಆದರೆ  ನೀರು ಪೂರೈಕೆ ಮಾಡದಿರುವುದರಿಂದ ಶೌಚಾಲಯ ಬಳಕೆಗೆ ಬಾರದಂತಾಗಿದೆ. ಇಲ್ಲಿಯವರೆಗೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಲೆಗೆ ಭೇಟಿ ನೀಡಿ ಪರಿಶೀಲನೆ ಮಾಡಿಲ್ಲ ಎಂದು ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.`ಶಾಲಾ ಮುಖ್ಯಗುರು ಮತ್ತು ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷರ ನಡುವೆ ಶಾಲೆಯ ಹಣಕಾಸಿನ ವಿಷಯದಲ್ಲಿ  ವೈಮನಸ್ಸು ಮೂಡಿರುವ ಹಿನ್ನೆಲೆಯಲ್ಲಿ ಶಾಲಾ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ. ಲಕ್ಷಾಂತರ ರೂಪಾಯಿ ಅನುದಾನ ಬಿಡುಗಡೆಯಾಗಿದ್ದರೂ ಅದನ್ನು ಸರಿಯಾಗಿ ಬಳಸಿದಂತಿಲ್ಲ~ ಎಂದು ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ ಆರ್ಗನೆಷನ್(ಎಐಡಿಎಸ್‌ಓ) ಹಲಕಟ್ಟ ಘಟಕದ ಅಧ್ಯಕ್ಷ ಮಲ್ಲಿನಾಥ ಹೂಂಡೆಕಲ್ ಆರೋಪಿಸಿದ್ದಾರೆ. `ಕೂಡಲೇ  ಸೂಕ್ತ ಕ್ರಮ ಜರುಗಿಸಬೇಕು.

ಇಲ್ಲದಿದ್ದರೆ ಚಿತ್ತಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ~ ಎಂದು ಎಚ್ಚರಿಸಿದ್ದಾರೆ. `ಶಾಲೆಗೆ ಸಂಬಂಧಿಸಿದ ಎಲ್ಲ ಕೆಲಸಗಳನ್ನು ನಮ್ಮಿಂದಲೇ ಮಾಡಿಸುತ್ತಾರೆ. ಮತ್ತು  ಮಕ್ಕಳ ಸಂಖ್ಯೆಗೆ ಅನುಗುಣವಾಗಿ  ಆಹಾರ ಧಾನ್ಯ ಕೊಡುವುದಿಲ್ಲ. ಕೇಳಿದರೆ ಕೆಲಸದಿಂದ ತೆಗೆಯುತ್ತೇನೆ ಎಂದು ಮುಖ್ಯಗುರು ಹೆದರಿಸುತ್ತಾರೆ~ ಎಂದು ಬಿಸಿಯೂಟದ ಮೇಲ್ವಿಚಾರಕಿ ದೂರುತ್ತಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.