21ರಿಂದ ಸರ್ಕಾರಿ ಆಸ್ಪತ್ರೆಗಳಿಗೆ ಬೀಗ

7
ಸರ್ಕಾರಿ ವೈದ್ಯಕೀಯ ಕಾಲೇಜುಗಳ ಸ್ವಾಯತ್ತತೆ ಕೈಬಿಡಲು ಆಗ್ರಹ

21ರಿಂದ ಸರ್ಕಾರಿ ಆಸ್ಪತ್ರೆಗಳಿಗೆ ಬೀಗ

Published:
Updated:

ಗುಲ್ಬರ್ಗ: ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ರಾಜ್ಯ ಸರ್ಕಾರವು ಸ್ವಾಯತ್ತತೆ ಆಧಾರದಲ್ಲಿ ಮುಂದುವರಿಸುತ್ತಿ ರುವುದರಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ಹಾಗೂ ವೈದ್ಯರು ತಾರತಮ್ಯ ನೀತಿಗೆ ಒಳಗಾಗುತ್ತಿದ್ದಾರೆ.ಕೂಡಲೇ ಎಲ್ಲ ಸರ್ಕಾರಿ ವೈದ್ಯಕೀಯ ಕಾಲೇಜುಗಳನ್ನು ಕುಟುಂಬ ಕಲ್ಯಾಣ ಹಾಗೂ ಆರೋಗ್ಯ ಇಲಾಖೆಗೆ ಸೇರ್ಪಡೆಗೊಳಿಸಬೇಕು. ಬೇಡಿಕೆ ಈಡೇರಿಸುವ ತನಕ ಇದೇ 21ರಿಂದ ಅನಿರ್ದಿಷ್ಟಾವಧಿಗೆ ರಾಜ್ಯದ ಎಲ್ಲ ಸರ್ಕಾರಿ ಆಸ್ಪತ್ರೆಗಳಿಗೆ ಬೀಗಹಾಕಲಾಗುವುದು ಎಂದು ಕರ್ನಾಟಕ ಸರ್ಕಾರ ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ನೌಕರರ ಹಿತರಕ್ಷಣಾ ಸಮಿತಿಯ ಪದಾಧಿಕಾರಿಗಳು ಶುಕ್ರವಾರ ಇಲ್ಲಿ ಹೇಳಿದರು.ರಾಜ್ಯ ಸರ್ಕಾರವು ನೀತಿಯನ್ನು ಬದಲಿಸಬೇಕು ಎಂದು 2006ರಿಂದ ವಿವಿಧ ರೀತಿಯಲ್ಲಿಪ್ರತಿಭಟನೆ ವ್ಯಕ್ತಪಡಿಸುತ್ತಾ ಬರಲಾಗಿದೆ. ಮಾನವೀಯತೆ ಆಧಾರ, ಅನುಕಂಪ ಶಬ್ದಗಳಿಂದ ಎಲ್ಲ ವೈದ್ಯರು, ನೌಕರರು ಬೇಸತ್ತಿದ್ದು, ಈ ಸಲ ತುರ್ತು ಸೇವೆಯೂ ಸೇರಿದಂತೆ ಪ್ರತಿಯೊಂದು ಕಾರ್ಯವನ್ನು ಸ್ಥಗಿತಗೊಳಿಸಿ ಮನೆಗೆ ಹೋಗಲಾಗುವುದು.ಸರ್ಕಾರವು ಏನಾದರೂ ಕ್ರಮ ಕೈಗೊಳ್ಳಲಿ. ಆಸ್ಪತ್ರೆಯ ಬೀಗವನ್ನು ಜಿಲ್ಲಾಧಿಕಾರಿ ಸುಪರ್ದಿಗೆ ಒಪ್ಪಿಸಲಾಗುವುದು ಎಂದು ಸಮಿತಿಯ ರಾಜ್ಯ ಘಟಕದ ಗೌರವ ಅಧ್ಯಕ್ಷ ಡಾ. ಎಚ್.ಎನ್. ರವೀಂದ್ರ ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.

ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಖಾಸಗಿಯವರಿಗೆ ವಹಿಸುವುದನ್ನು ತಕ್ಷಣವೆ ನಿಲ್ಲಿಸಬೇಕು.ಈಗಾಗಲೇ ಖಾಸಗಿಯವರಿಗೆ ವಹಿಸಿರುವ ಆಸ್ಪತ್ರೆಗಳನ್ನು ಹಿಂಪಡೆದುಕೊಳ್ಳಬೇಕು. ವರ್ಗಾವಣೆಗಾಗಿ ರಾಜ್ಯಮಟ್ಟದಲ್ಲಿ ಕೌನ್ಸೆಲಿಂಗ್ ನಡೆಸುವ ಬದಲು ಜಿಲ್ಲಾ, ವಿಭಾಗ ಹಾಗೂ ರಾಜ್ಯ ಮಟ್ಟದಲ್ಲಿ ಕೌನ್ಸೆಲಿಂಗ್ ನಡೆಸಬೇಕು. ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯನ್ನು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಿಂದ ಹೊರತರಬೇಕು ಎಂದು ಒತ್ತಾಯಿಸಿದರು.ಸಂಬಳ ನೀಡುವುದಕ್ಕೆ ಆಯಾ ಜಿಲ್ಲಾ ಪಂಚಾಯಿತಿ ಅಧಿಕಾರಿಗಳು ಅನುಮೋದನೆ ನೀಡಬೇಕಾಗಿರುವುದರಿಂದ ಅನೇಕ ತಿಂಗಳಿಂದ ಸರ್ಕಾರಿ ಆಸ್ಪತ್ರೆಗಳ ನೌಕರರು ವಿವಿಧ ಜಿಲ್ಲೆಗಳಲ್ಲಿ ಸಮರ್ಪಕ ಸಂಬಳ ಪಡೆಯುತ್ತಿಲ್ಲ. ಸಂಬಳಕ್ಕಾಗಿ ಜಿಲ್ಲಾ ಪಂಚಾಯಿತಿಗೆ ನಿರಂತರ ಅಧಿಕಾರಿಗಳ ಅಲೆದಾಟ ನಡೆಸಬೇಕಾದ ಅನಿವಾರ್ಯತೆ ಇದೆ ಎಂದರು.ವೈದ್ಯಕೀಯ ಶಿಕ್ಷಣ ಇಲಾಖೆ ಅಧೀನದಲ್ಲಿ ವೈದ್ಯಕೀಯ ಕಾಲೇಜುಗಳಿಗೆ ಸ್ವಾಯತ್ತತೆ ಬಂದ ಮೇಲೆ ಸರ್ಕಾರಿ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ಹಾಗೂ ವೈದ್ಯರು ಜಿಲ್ಲಾಮಟ್ಟದ ಆಸ್ಪತ್ರೆಗಳಲ್ಲಿ ಸೇರಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಸರ್ಕಾರಿ ಆಸ್ಪತ್ರೆಗಳ ನೌಕರರ ಹಕ್ಕು ಮೊಟಕುಗೊಳಿಸಿ, ಸ್ವಾಯತ್ತತೆ ನೀಡುತ್ತಿರುವ ಕ್ರಮ ಸರಿಯಾಗಿಲ್ಲ.ರಾಜ್ಯದಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದರು ಸೇರಿ 80 ಸಾವಿರ ನೌಕರರು ಇದರಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಎಂದು ಸಮಿತಿಯ ರಾಜ್ಯ ಘಟಕದ ಅಧ್ಯಕ್ಷ ಅಧ್ಯಕ್ಷ ರಂಗೇಗೌಡ ಹೇಳಿದರು.

ಕರ್ನಾಟಕ ಸರ್ಕಾರ ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ನೌಕರರ ಹಿತರಕ್ಷಣಾ ಸಮಿತಿ ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಜರಿದ್ದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry