ಗುಲ್ಬರ್ಗಕ್ಕೆ ಪೊಲೀಸ್ ಆಯುಕ್ತರ ಕಚೇರಿ: ಅಶೋಕ

7

ಗುಲ್ಬರ್ಗಕ್ಕೆ ಪೊಲೀಸ್ ಆಯುಕ್ತರ ಕಚೇರಿ: ಅಶೋಕ

Published:
Updated:

ಗುಲ್ಬರ್ಗ: ಗುಲ್ಬರ್ಗ ಮತ್ತು ಬೆಳಗಾವಿಯಲ್ಲಿ ಪೊಲೀಸ್ ಆಯುಕ್ತರ ಕಚೇರಿ (ಕಮಿಷನರೇಟ್) ಆರಂಭಿಸುವ ಕುರಿತು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಉಪಮುಖ್ಯಮಂತ್ರಿ, ಗೃಹ ಮತ್ತು ಸಾರಿಗೆ ಸಚಿವ ಆರ್. ಅಶೋಕ ಹೇಳಿದರು.ನಗರದಲ್ಲಿ ಮಂಗಳವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು, ವೇಗವಾಗಿ ಬೆಳೆಯುತ್ತಿರುವ ಗುಲ್ಬರ್ಗ ಮತ್ತು ಬೆಳಗಾವಿಯಲ್ಲಿ ಅಪರಾಧ ಪ್ರಮಾಣವನ್ನು ನಿಯಂತ್ರಿಸಲು ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.ರಾಜ್ಯದಲ್ಲಿ ನಕ್ಸಲರ ಶಕ್ತಿ ಕುಂದಿದೆ. ಈ ಹಿನ್ನೆಲೆಯಲ್ಲಿ ಕಂಡಲ್ಲಿ ಗುಂಡು ಆದೇಶ ಹಿಂದಕ್ಕೆ ಪಡೆಯಲಾಗಿದೆ ಎಂದರು.ಪೊಲೀಸ್ ಹುದ್ದೆ ಭರ್ತಿಗೆ ವಿಶೇಷ ನೇಮಕಾತಿ ನೀತಿ ಜಾರಿಗೆ ತರುವ ಕುರಿತು ಸರ್ಕಾರ ಚಿಂತನೆ ನಡೆಸುತ್ತಿದೆ. ಈ ನೀತಿಯಿಂದ ಹುದ್ದೆಗಳು ಖಾಲಿಯಾದ ಕೂಡಲೇ ಹೊಸ ನೇಮಕಾತಿ ನಡೆಸಲು ಅವಕಾಶ ಇದೆ. ವಿತ್ತ ಇಲಾಖೆಯ ಅನುಮೋದನೆಗೆ ಕಾಯಬೇಕಾಗಿಲ್ಲ ಎಂದು ವಿವರಿಸಿದ ಅವರು, ರಾಜ್ಯದಲ್ಲಿ ಮೂರು ಸಾವಿರ ಪೊಲೀಸರ ನೇಮಕಾತಿ ಪ್ರಕ್ರಿಯೆ ನಡೆದಿದೆ. ಕೈಗಾರಿಕಾ ಭದ್ರತಾ ಪಡೆ ರಚಿಸುವ ಮೂಲಕ ಕೈಗಾರಿಕೆ ಹಾಗೂ ಅಣೆಕಟ್ಟೆಗಳಿಗೆ ಭದ್ರತೆ ಒದಗಿಸಲು ಉದ್ದೇಶಿಸಲಾಗಿದೆ. ಭಯೋತ್ಪಾದಕ ಚಟುವಟಿಕೆ ಹತ್ತಿಕ್ಕಲು ಭಯೋತ್ಪಾದನಾ ನಿಗ್ರಹ ಪಡೆ ರಚಿಸಲಾಗುವುದು ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry