ಸಿರವಾರ: ಗ್ರಾಪಂ ಸದಸ್ಯರು ಕಾಂಗ್ರೆಸ್ ಸೇರ್ಪಡೆ

7

ಸಿರವಾರ: ಗ್ರಾಪಂ ಸದಸ್ಯರು ಕಾಂಗ್ರೆಸ್ ಸೇರ್ಪಡೆ

Published:
Updated:

ಸಿರವಾರ (ಕವಿತಾಳ): ಪಟ್ಟಣದಲ್ಲಿ ಗ್ರಾಮ ಪಂಚಾಯಿತಿಯ ಕೆಲ ಸದಸ್ಯರು ಬಿಜೆಪಿ ತೊರೆದು ಶಾಸಕ ಜಿ.ಹಂಪಯ್ಯ ನಾಯಕ ಸಮ್ಮುಖದಲ್ಲಿ ಶುಕ್ರವಾರ ಕಾಂಗ್ರೆಸ್ ಸೇರಿದರು.ಈ ಸಂದರ್ಭದಲ್ಲಿ ಶಾಸಕರು ಮಾತನಾಡಿ ರಾಜ್ಯದಲ್ಲಿ ಬಿಜೆಪಿ ಸರ್ಕಾರದ ದುರಾಡಳಿತದಿಂದ ಜನರು ಬೇಸತ್ತಿದ್ದಾರೆ ಎಂದರು. ಆಶಾಸ್ವನೆಗಳನ್ನು ನೀಡುವ ಜಾಯಮಾನ ತಮ್ಮದಲ್ಲ ಎಂದು ಸಮರ್ಥಿಸಿಕೊಂಡ ಅವರು ಜನರ ಆಶೀರ್ವಾದ ಇದ್ದರೆ ಮುಂದಿನ ದಿನಗಳಲ್ಲಿ ಕ್ಷೇತ್ರದಲ್ಲಿ ಹೆಚ್ಚಿನ ಅಭಿವೃದ್ದಿ ಕೆಲಸ ಮಾಡುವ ಭರವಸೆ ನೀಡಿದರು.ಗ್ರಾಮ ಪಂಚಾಯಿತಿ ಅಧ್ಯಕ್ಷ ಸೂರಿ ದುರುಗಣ್ಣ ನಾಯಕ, ಸದಸ್ಯರಾದ ಅಮರೇಶ ಗಡ್ಲ, ಸೂಗಪ್ಪ ಹೂಗಾರ, ಮಲ್ಲಿಕ ಇತರರು ಪಕ್ಷ ಸೇರಿದರು. ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಅಸ್ಲಂಪಾಶಾ, ತಾಲ್ಲೂಕು ಪಂಚಾಯಿತಿ ಸದಸ್ಯ ದಾನನಗೌಡ, ಚಂದ್ರು ಕಳಸ, ಚುಕ್ಕಿ ಶಿವಾನಂದ, ಟಿ.ಆರ್.ಪಾಟೀಲ ಇತರರು ಉಪಸ್ಥಿತರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry