ಈಶಾನ್ಯ ಸಾರಿಗೆ ಸಂಸ್ಥೆಗೆ ಪ್ರಶಸ್ತಿ

7

ಈಶಾನ್ಯ ಸಾರಿಗೆ ಸಂಸ್ಥೆಗೆ ಪ್ರಶಸ್ತಿ

Published:
Updated:
ಈಶಾನ್ಯ ಸಾರಿಗೆ ಸಂಸ್ಥೆಗೆ ಪ್ರಶಸ್ತಿ

ಗುಲ್ಬರ್ಗ: ಕೇಂದ್ರ ಸರ್ಕಾರದ ರಸ್ತೆ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿ ಸಚಿವಾಲಯವು ನೀಡುವ 2011-12ನೇ ಸಾಲಿನ ಸಾರಿಗೆ ಮಂತ್ರಿಗಳ ಟ್ರೋಫಿ ಹಾಗೂ ನಗದು ಬಹುಮಾನರೂ 1.50 ಲಕ್ಷವನ್ನು ಈ ಬಾರಿ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಪಡೆದಿದೆ.ನವದೆಹಲಿಯ ವಿಜ್ಞಾನ ಭವನದಲ್ಲಿ ಸೋಮವಾರ ನಡೆದ ಸಮಾರಂಭದಲ್ಲಿ ರಸ್ತೆ ಸಂಪರ್ಕ ಮತ್ತು ಹೆದ್ದಾರಿ ಇಲಾಖೆ ಸಚಿವ ಡಾ. ಸಿ.ಪಿ. ಜೋಷಿ ಅವರು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಜಿ.ಎನ್. ಶಿವಮೂರ್ತಿ ಅವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಿದರು.ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಶಿವಮೂರ್ತಿ, ಇದು ಅತ್ಯಂತ ಹಿಂದುಳಿದ ಹೈದರಾಬಾದ್ ಕರ್ನಾಟಕ ಭಾಗದ ಜನತೆಗೆ ಮತ್ತು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಸಿಬ್ಬಂದಿಗೆ ಸಂದ ಅತ್ಯಮೂಲ್ಯ ಗೌರವವಾಗಿದೆ ಎಂದು ತಿಳಿಸಿ, ಅಭಿನಂದನೆ ಸಲ್ಲಿಸಿದರು.ರಾಷ್ಟ್ರಮಟ್ಟದ ಪ್ರತಿಷ್ಠಿತ ಪ್ರಶಸ್ತಿ ಇದಾಗಿದೆ. ಗ್ರಾಮಾಂತರ ಪ್ರದೇಶದ ಸೇವೆಯಲ್ಲಿ ಅತ್ಯಂತ ಕಡಿಮೆ ಅಪಘಾತ ಹಾಗೂ ರಸ್ತೆ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿದ್ದನ್ನು ಪರಿಗಣಿಸಿ ಇದನ್ನು ನೀಡಲಾಗಿದೆ. 1001ರಿಂದ 4000 ಗ್ರಾಮೀಣ ಬಸ್ ಸಂಚಾರ ಸೇವೆಯನ್ನು ಒದಗಿಸುವ ರಾಜ್ಯ ಸಾರಿಗೆಗೆ ಈ ಪ್ರಶಸ್ತಿ ನೀಡಲಾಗುತ್ತಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry