ಮಂಗಳವಾರ, ನವೆಂಬರ್ 19, 2019
29 °C
ಹಸಿರು ಕ್ರಾಂತಿ ಹರಿಕಾರ ಬಾಬು ಜಗಜೀವನರಾಂ

ನೀತಿ ಸಂಹಿತೆ: ಸರಳ ಜಯಂತಿ ಆಚರಣೆಕಚೇರಿಯಲ್ಲಿ ಶುಕ್ರವಾರ ಸರಳವಾಗಿ ಆಚರಿಸಲಾಯಿತು.

Published:
Updated:

ಗುಲ್ಬರ್ಗ: ಹಸಿರು ಕ್ರಾಂತಿಯ ಹರಿಕಾರ ಮಾಜಿ ಉಪಪ್ರಧಾನಿ ಬಾಬು ಜಗಜೀವನರಾಂ 106ನೇ ಜಯಂತಿಯನ್ನು ಮಹಾನಗರ ಪಾಲಿಕೆ ಕಚೇರಿಯಲ್ಲಿ ಶುಕ್ರವಾರ ಸರಳವಾಗಿ ಆಚರಿಸಲಾಯಿತು.ಜಿಲ್ಲಾಧಿಕಾರಿ ಡಾ. ಜಗದೀಶ್ ಕೆ.ಜಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸತೀಶಕುಮಾರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪಲ್ಲವಿ ಅಕುರತಿ, ಉಪಕಾರ್ಯದರ್ಶಿ ವಸಂತ ಕುಲಕರ್ಣಿ, ಮಹಾನಗರ ಪಾಲಿಕೆ ಆಯುಕ್ತ ಎ.ಎಸ್. ರಾಯ್ಕರ್, ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಡಿ. ಸುರೇಶ್ ಜಾಧವ್ ಮತ್ತು ಸಿಬ್ಬಂದಿ ಬಾಬು ಜಗಜೀವನರಾಂ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವಿಸಿದರು. ವೀರಭದ್ರ ಸಿಂಪಿ ಸ್ವಾಗತಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಗುಲ್ಬರ್ಗ ಮಹಾನಗರ ಪಾಲಿಕೆ, ಸಮಾಜಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಕಾರ್ಯಕ್ರಮ ಸಂಘಟಿಸಲಾಗಿತ್ತು.ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪಲ್ಲವಿ ಅಕುರತಿ, ಉಪಕಾರ್ಯದರ್ಶಿ ವಸಂತ ಕುಲಕರ್ಣಿ, ಡಿ.ಆರ್.ಡಿ.ಎ. ಯೋಜನಾ ನಿರ್ದೇಶಕ ಎಸ್.ಎಂ. ಕೆಂಚಣ್ಣನವರ್, ಸಹಾಯಕ ಕಾರ್ಯದರ್ಶಿ ಸಂಪತಕುಮಾರ್ ಪಾಟೀಲ ಬಾಬು ಜಗಜೀವನರಾಂ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು. ಸಹಾಯಕ ಯೋಜನಾಧಿಕಾರಿ ರಾಠೋಡ ಜಗಜೀವನರಾಂ ವ್ಯಕ್ತಿತ್ವ ಹಾಗೂ ಜೀವನ ಚರಿತ್ರೆಯ ಬಗ್ಗೆ ಮಾತನಾಡಿದರು. ದೇಸಾಯಿ ಸ್ವಾಗತಿಸಿದರು.

ಪ್ರತಿಕ್ರಿಯಿಸಿ (+)