ಶುಕ್ರವಾರ, ಮೇ 7, 2021
25 °C

`ಹೋರಾಟವೇ 371 ತಿದ್ದುಪಡಿಗೆ ಕಾರಣ'

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಲ್ಬರ್ಗ: ಈ ಭಾಗದ ನಾಯಕರ ನಿರಂತರ ಹೊರಾಟವೇ ಸಂವಿಧಾನದ 371(ಜೆ) ಕಲಂ ತಿದ್ದುಪಡಿಗೆ ಕಾರಣ ಎಂದು ವಿಧಾನ ಪರಿಷತ್ ಸದಸ್ಯ ಅಮರನಾಥ ಪಾಟೀಲ  ಹೇಳಿದರು.ನಗರದ ಕನ್ನಡ ಭವನದಲ್ಲಿ ಭಾನುವಾರ ಕರ್ನಾಟಕ ಸಮರ ಸೇನೆ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.371 (ಜೆ) ಕಲಂಗೆ ಸಂಬಂಧಿಸಿದ ನಿಯಮಾವಳಿಗಳನ್ನು ಕೂಡಲೇ ರೂಪಿಸಬೇಕು. ಆ ಬಳಿಕ ಮೀಸಲಾತಿ ನಿಗದಿ ಪಡಿಸಿ ಆದೇಶ ಹೊರಡಿಸಬೇಕು. ಅಲ್ಲಿತನಕ ಸರ್ಕಾರಿ ನೇಮಕಾತಿಗಳನ್ನು ತಡೆಹಿಡಿಯಬೇಕು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದೇನೆ ಎಂದು ಅವರು ಹೇಳಿದರು. ಗುರುರಾಜ ಕುಲಕರ್ಣಿ, ನಾಗರಾಜ ಸಾದ್ವಿ, ನಂದಕುಮಾರ ನಾಗಭುಜಂಗೆ, ಧರ್ಮಸಿಂಗ್ ತಿವಾರಿ, ಸಚಿನ್ ಫರಹತಾಬಾದ್ ಅವರನ್ನು ಸನ್ಮಾನಿಸಲಾಯಿತು.ಸೇನೆ ಸಂಸ್ಥಾಪಕ ಅಧ್ಯಕ್ಷ ಮಂಜುನಾಥ ನಾಲವಾರಕರ್, ಗೌರವಾಧ್ಯಕ್ಷ ಆರ್.ಆರ್. ಪಾಟೀಲ, ವಿಶ್ವ ಸೇವಾ ಮಿಷನ್ ಅಧ್ಯಕ್ಷ ವಿಶ್ವನಾಥ ಸ್ವಾಮಿ, ಜಿಲ್ಲಾ ನ್ಯಾಯವಾದಿಗಳ ಸಂಘದ ಮಾಜಿ ಜಿಲ್ಲಾ ಅಧ್ಯಕ್ಷ ಎಂ.ಎನ್. ಪಾಟೀಲ,ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಗೌರವಾಧ್ಯಕ್ಷ ಸುರೇಶ ಬಡಿಗೇರ, ಜಿಲ್ಲಾ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕ ಡಿ.ಎಚ್. ಕೇಸರಿ, ಸಂಘಟನೆಯ ಪದಾಧಿಕಾರಿಗಳಾದ ನಾಗನಾಥ ನಾಲವಾರಕರ್, ಮಹಮ್ಮದ್ ಸಾದಿಕ್ ಅಲಿ, ಶರಣು ಹೊಸಮನಿ, ಅರವಿಂದ ನಾಟಿಕಾರ್, ಮಂಜುನಾಥ ಸ್ವಾಮಿ, ಸಾಯಿಬಣ್ಣ ಕಾವಲದಾರ್ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.