ಬುಧವಾರ, ಮೇ 12, 2021
18 °C

ಖರ್ಗೆಗೆ ರೈಲ್ವೆ ಖಾತೆ: ಎಚ್‌ಕೆಸಿಸಿಐ ಹರ್ಷ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಲ್ಬರ್ಗ: ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೇಂದ್ರ ಸರ್ಕಾರ ರೈಲ್ವೆ ಖಾತೆ ವಹಿಸಿರುವುದಕ್ಕೆ ಹೈದರಾಬಾದ್ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕೆಗಳ ಸಂಸ್ಥೆ (ಎಚ್‌ಕೆಸಿಸಿಐ) ಹರ್ಷ ವ್ಯಕ್ತಪಡಿಸಿದೆ.ಆಡಳಿತದಲ್ಲಿ ಸಾಕಷ್ಟು ಅನುಭವ ಹೊಂದಿರುವ ಖರ್ಗೆ ಅವರ ಸಾಧನೆಯ ಕಿರೀಟಕ್ಕೆ ಮತ್ತೊಂದು ಗರಿ ಇಟ್ಟಂತಾಗಿದ್ದು, ರೈಲು ಸೇವೆ ಸುಧಾರಣೆಗೆ ಸಂಬಂಧಿಸಿದಂತೆ ಹೈದರಾಬಾದ್ ಕರ್ನಾಟಕ ಪ್ರದೇಶದಲ್ಲಿ ದಶಕಗಳಿಂದ ನನೆಗುದಿಗೆ ಬಿದ್ದಿರುವ ಬೇಡಿಕೆಗಳು ಇವರ ಅವಧಿಯಲ್ಲಿ ಪೂರ್ಣವಾಗುವ ವಿಶ್ವಾಸ ನಿಚ್ಚಳವಾಗಿದೆ ಎಂದು ಎಚ್‌ಕೆಸಿಸಿಐ ಅಧ್ಯಕ್ಷ ಉಮಾಕಾಂತ ನಿಗ್ಗುಡಗಿ ಹಾಗೂ ಗೌರವ ಕಾರ್ಯದರ್ಶಿ ಬಸವರಾಜ ಹಡಗಿಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಅಭಿವೃದ್ಧಿಗೆ ಸಾಕಷ್ಟು ಕಠಿಣ ಪರಿಶ್ರಮವಹಿಸುವ ಬುದ್ಧಿಶಾಲಿ ರಾಜಕಾರಣಿಯೊಬ್ಬರು ಈ ಭಾಗದಲ್ಲಿರುುದು ಒಂದು ವರದಾನವಾಗಿದ್ದು, ರೈಲ್ವೆಗೆ ಸಂಬಂಧಿಸಿದಂತೆ ಹೈದರಾಬಾದ್ ಕರ್ನಾಟಕ ಎಲ್ಲ ರೀತಿಯಲ್ಲೂ ಅಭಿವೃದ್ಧಿಯಾಗುವುದು ನಿಶ್ಚಿತ ಎಂದು ತಿಳಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.