ಮದ್ಯದ ಅಂಗಡಿಸ್ಥಳಾಂತರ ತಡೆಗೆ ಮನವಿ
ಗುಲ್ಬರ್ಗ: ಜೇವರ್ಗಿ ತಾಲ್ಲೂಕಿನ ಚಿಗರಹಳ್ಳಿ ಕ್ರಾಸ್ನಲ್ಲಿದ್ದ ಮದ್ಯದ ಅಂಗಡಿಯನ್ನು ಸೊನ್ನ ಕ್ರಾಸಿಗೆ ಸ್ಥಳಾಂತರ ಮಾಡುವುದನ್ನು ತಡೆಗಟ್ಟುವಂತೆ ಆಗ್ರಹಿಸಿ ಜಿಲ್ಲಾ ಜಯ ಕರ್ನಾಟಕ ಸಂಘಟನೆಯು ಮಂಗಳವಾರ ಅಬಕಾರಿ ಇಲಾಖೆಯ ಉಪ ಆಯುಕ್ತರಿಗೆ ಮನವಿ ಸಲ್ಲಿಸಿದೆ.
ಜೇವರ್ಗಿ ತಾಲ್ಲೂಕಿನ ಅಬಕಾರಿ ಅಧಿಕಾರಿಗಳು ಹಣದ ಆಮಿಷಕ್ಕಾಗಿ ಚಿಗರಹಳ್ಳಿ ಕ್ರಾಸನಲ್ಲಿದ್ದ ರೇಣುಕಾ ಮದ್ಯದ ಅಂಗಡಿಯನ್ನು ಸೊನ್ನ ಮಠದ ಶಿಕ್ಷಣ ಸಂಸ್ಥೆಯ ಪಕ್ಕದಲ್ಲಿಯೇ ತೆರೆಯಲು ಪರವಾನಗಿ ನೀಡಿರುತ್ತಾರೆ.
ಕಾನೂನಿನ ಪ್ರಕಾರ ಮದ್ಯದ ಅಂಗಡಿಯ ರಾಷ್ಟ್ರೀಯ ಹೆದ್ದಾರಿಯಿಂದ ಸುಮಾರು 200 ಮೀಟರ್ ದೂರ ಇರಬೇಕು. ಕಾನೂನು ಇದ್ದರೂ ಅದೆಲ್ಲವನ್ನು ಲೆಕ್ಕಿಸದೆ ಅಬಕಾರಿ ಅಧಿಕಾರಿಗಳು ಮದ್ಯದ ಅಂಗಡಿಗೆ ಪರವಾನಗಿ ನೀಡಿರುತ್ತಾರೆ.
ಆದ್ದರಿಂದ ಅಂಗಡಿಯನ್ನು ಸ್ಥಳಾಂತರವನ್ನು ಗೊಳಿಸುವಂತೆ ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಎಸ್. ಸಾರವಾಡ ಹಾಗೂ ಜೇವರ್ಗಿ ತಾಲ್ಲೂಕು ಅಧ್ಯಕ್ಷ ಸುಧೀಂದ್ರ ಆಗ್ರಹಿಸಿದ್ದಾರೆ.
ಒಂದು ವೇಳೆ 15 ದಿನದೊಳಗಾಗಿ ಈ ಮದ್ಯದ ಅಂಗಡಿ ರದ್ದುಗೊಳಿಸದಿದ್ದಲ್ಲಿ ಜಯ ಕರ್ನಾಟಕ ಸಂಘಟನೆಯು ರಸ್ತೆಗಿಳಿದು ಹೋರಾಟ ಮಾಡಲಿದೆ ಎಂದು ಎಚ್ಚರಿಸಿದ್ದಾರೆ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೋಲಿಸ ವರಿಷ್ಠಾಧಿಕಾರಿಗೂ ಸಹ ಮನವಿ ಸಲ್ಲಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.