`ಕಲಂ 371 (ಜೆ): ಉದ್ಯೋಗಾವಕಾಶ ಲಭ್ಯ'

7

`ಕಲಂ 371 (ಜೆ): ಉದ್ಯೋಗಾವಕಾಶ ಲಭ್ಯ'

Published:
Updated:

ಗುಲ್ಬರ್ಗ:  `ಸಂವಿಧಾನದ ಕಲಂ 371 (ಜೆ) ತಿದ್ದುಪಡಿಯಿಂದ ಹೈದರಾಬಾದ್-ಕರ್ನಾಟಕ ವ್ಯಾಪ್ತಿಯ ಜಿಲ್ಲೆಗಳ ವಿದ್ಯಾರ್ಥಿಗಳಿಗೆ ಶಿಕ್ಷಣ, ಉದ್ಯೋಗದಲ್ಲಿ ಸಾಕಷ್ಟು ಮೀಸಲಾತಿ ಲಭ್ಯವಾಗಲಿದೆ' ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಹೇಳಿದರು.ನಗರದ ಶರಣಬಸವ ಶತಮಾನೋತ್ಸವ ಭವನದಲ್ಲಿ ದೊಡ್ಡಪ್ಪ ಅಪ್ಪ ವಸತಿಸಹಿತ ಪದವಿಪೂರ್ವ ಕಾಲೇಜಿನ ವತಿಯಿಂದ ಭಾನುವಾರ ಏರ್ಪಡಿಸಿದ್ದ `ವಿಜ್ಞಾನ ಅಕಾಡೆಮಿ' ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.`ದೊಡ್ಡಪ್ಪ ಅಪ್ಪ ಅವರು ತಾಂತ್ರಿಕ, ವೈದ್ಯಕೀಯ ಕಾಲೇಜುಗಳನ್ನು ಆರಂಭಿಸುವ ಮೂಲಕ ಈ ಭಾಗದ ಜನರಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿದ್ದಾರೆ. ವಿದ್ಯಾರ್ಥಿಗಳು ಅದರ ಸದುಪಯೋಗ ಪಡೆದುಕೊಳ್ಳಬೇಕು. ಸಂವಿಧಾನದ 371 (ಜೆ) ಕಲಂ ತಿದ್ದುಪಡಿಯಿಂದ ಈ ಭಾಗದ ಶಿಕ್ಷಣ ಸಂಸ್ಥೆಗಳಲ್ಲಿ ಶೇ 70ರಷ್ಟು ಸೀಟುಗಳು ಲಭ್ಯವಾಗಲಿವೆ. ಸ್ಪರ್ಧಾತ್ಮಕ ಜಗತ್ತಿನಲ್ಲಿ ಉನ್ನತ ಸ್ಥಾನಮಾನ ಗಳಿಸಲು ಇದು ನೆರವಾಗಲಿದೆ' ಎಂದು ಅಭಿಪ್ರಾಯಪಟ್ಟರು.`ರಾಯಚೂರಿನಲ್ಲಿ 2, ಬಳ್ಳಾರಿ-1, ಬೀದರ್-1 ಹಾಗೂ ಗುಲ್ಬರ್ಗದಲ್ಲಿ ಈಗಾಗಲೇ 3 ವೈದ್ಯಕೀಯ ಕಾಲೇಜುಗಳಿದ್ದು, ಇನ್ನೊಂದು ಕಾಲೇಜನ್ನು ಆರಂಭಿಸಲಾಗುವುದು. ವಿದ್ಯಾರ್ಥಿಗಳು ಪ್ರಾಮಾಣಿಕತೆ, ಕಠಿಣ ಪರಿಶ್ರಮ ಹಾಗೂ ಮಾನವೀಯತೆ ಮೈಗೂಡಿಸಿಕೊಳ್ಳುವ ಮೂಲಕ ಉತ್ತಮ ಸೇವೆ ಸಲ್ಲಿಸಬೇಕು. ಉತ್ತಮ ಭವಿಷ್ಯ ರೂಪಿಸಿಕೊಂಡು ಸಮಾಜಕ್ಕೆ ಅನುಪಮ ಕೊಡುಗೆ ಸಲ್ಲಿಸಬೇಕು' ಎಂದು ಹೇಳಿದರು.ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಶರಣಬಸಪ್ಪ ಅಪ್ಪ ಸಾನ್ನಿಧ್ಯ ವಹಿಸಿದ್ದರು. ಎಂ.ಆರ್.ವೈದ್ಯಕೀಯ ಕಾಲೇಜಿನ ಉಪ ಶಸ್ತ್ರಚಿಕಿತ್ಸಕ ಡಾ.ಮಲ್ಲಿಕಾರ್ಜುನ ಮಿಸ್ಟಿ, ಡಾ.ರಾಮಕೃಷ್ಣರೆಡ್ಡಿ ಉಪಸ್ಥಿತರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry