`ಅಪ್ಪನ ಗುಡಿ'ಯಲ್ಲಿ ಜನಸಾಗರ

7
ಕೊನೆಯ ಶ್ರಾವಣ ಸೋಮವಾರ

`ಅಪ್ಪನ ಗುಡಿ'ಯಲ್ಲಿ ಜನಸಾಗರ

Published:
Updated:

ಗುಲ್ಬರ್ಗ: ಶ್ರಾವಣ ಮಾಸದ ಕೊನೆಯ ಸೋಮವಾರದ ದಿನ ನಗರದ ಶರಣಬಸವೇಶ್ವರ ದೇವಸ್ಥಾನಕ್ಕೆ ನೂರಾರು ಭಕ್ತರು ಭೇಟಿ ನೀಡಿ ದೇವರ ದರ್ಶನ ಪಡೆದರು.ಬೆಳಿಗ್ಗೆ 5 ಗಂಟೆಯಿಂದ ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತಾದಿಗಳು, ಹೂ-ಹಣ್ಣು, ನೈವೇದ್ಯ ಸಮರ್ಪಿಸಿದರು. ದೂರದ ಊರುಗಳಿಂದ ಕೆಲವರು ಪಾದಯಾತ್ರೆ ಮೂಲಕ ಆಗಮಿಸಿ ಶರಣಬಸವೇಶ್ವರರ ದರ್ಶನ ಪಡೆದು ಪುನೀತರಾದರು.ಶ್ರಾವಣ ಮಾಸದ ಆರಂಭದ ದಿನದಿಂದ ಪ್ರತಿ ನಿತ್ಯ ಸಂಜೆ ದೇವಸ್ಥಾನದ ಆವರಣದಲ್ಲಿ ಪೂಜೆ-ಪುನಸ್ಕಾರ, ಪ್ರವಚನ, ಉಪನ್ಯಾಸ, ಸಂಗೀತ ಕಾರ್ಯಕ್ರಮಗಳು ಜರುಗಿದವು. ನಗರದ ವಿವಿಧ ದೇವಸ್ಥಾನಗಳಲ್ಲೂ ಸಂಜೆ ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದ ಭಕ್ತರು ಪೂಜೆ ಸಲ್ಲಿಸಿದರು.ಜೇವರ್ಗಿ: ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್ ಅರ್ಜಿ

ಗುಲ್ಬರ್ಗ:
  1ರಿಂದ 10ನೇ ತರಗತಿಯಲ್ಲಿ ಓದುತ್ತಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ ಮೆಟ್ರಿಕ್ ಪೂರ್ವ ಶಿಷ್ಯ ವೇತನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಅರ್ಹ ವಿದ್ಯಾರ್ಥಿಗಳು ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ ಇಲಾಖೆ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಶಿಷ್ಯ ವೇತನ ಪಡೆಯಬಯಸುವ ವಿದ್ಯಾರ್ಥಿಗಳು ಸೆ. 30ರೊಳಗೆ ಹೆಸರು ನೋಂದಾಯಿಸಿಕೊಳ್ಳಬೇಕು. ಮಾಹಿತಿಗೆ ಜೇವರ್ಗಿ ತಾಲ್ಲೂಕು ಸಮಾಜ ಕಲ್ಯಾಣ ಅಧಿಕಾರಿ ಕಚೇರಿಯನ್ನು ಸಂಪರ್ಕಿಸಬಹುದು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry