ಭಾನುವಾರ, ಡಿಸೆಂಬರ್ 15, 2019
26 °C

ಮಹಿಳಾ ಸ್ವಾವಲಂಬನೆಗೆ ಕರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಹಿಳಾ ಸ್ವಾವಲಂಬನೆಗೆ ಕರೆ

ಗುಲ್ಬರ್ಗ: ಕರ್ನಾಟಕ ರಾಜ್ಯ ಮಹಿಳಾ ಉದ್ಯಮಿಗಳ ಸಂಸ್ಥೆ (ಅವೇಕ್)ಯು ಉದ್ಯಮಶೀಲತಾ ತರಬೇತಿ ನೀಡುತ್ತಿದ್ದು, ಮಹಿಳೆಯರು ಇದರ ಸದುಪಯೋಗ ಮಾಡಿಕೊಂಡು ಸ್ವಾವಲಂಬಿಗಳಾಗಬೇಕು ಎಂದು ಸಂಸ್ಥೆಯ ಸಂಯೋಜನಾಧಿಕಾರಿ ಶೋಭಾ ಹೇಳಿದರು.ನಗರದ ಕೆಎಸ್‌ಎಸ್‌ಐಡಿಸಿ ಆಹಾರ ಸಂಸ್ಕರಣಾ ಕಚೇರಿಯಲ್ಲಿ `ಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ಕೈಗಾರಿಕಾ ಸಚಿವಾಲಯ- ಎಂಎಸ್‌ಎಂಇ' ಸಹಯೋಗದೊಂದಿಗೆ ಬುಧವಾರ ಆಯೋಜಿಸಿದ್ದ `ಉದ್ಯಮಶೀಲತಾ ಅಭಿವೃದ್ಧಿ ಹಾಗೂ ಬೇಕರಿ ಉತ್ಪನ್ನಗಳ ಕುರಿತು ಕೌಶಲ ತರಬೇತಿ' ಕಾರ್ಯಾಗಾರದಲ್ಲಿ ಮಾತನಾಡಿದರು.ಆಹಾರ ಉತ್ಪನ್ನಗಳ ಮಾರುಕಟ್ಟೆ ಸಾಕಷ್ಟು ವಿಸ್ತಾರವಾಗಿದ್ದು, ಗುಣಮಟ್ಟದ ಉತ್ಪನ್ನಗಳಿಗೆ ಸದಾ ಬೇಡಿಕೆ ಇದ್ದೇ ಇರುತ್ತದೆ. ಈ ನಿಟ್ಟಿನಲ್ಲಿ ಬೇಕರಿ ಉದ್ಯಮದ ಒಟ್ಟು 23 ಉತ್ಪನ್ನಗಳ ಬಗ್ಗೆ ಅವೇಕ್‌ನಿಂದ ಮಹಿಳೆಯರಿಗೆ ತರಬೇತಿ ನೀಡಲಾಗುತ್ತದೆ ಎಂದು                    ಹೇಳಿದರು.ಗುಲ್ಬರ್ಗ ಜಿಲ್ಲೆಯಲ್ಲಿ ಶೀಘ್ರದಲ್ಲೆ ತರಬೇತಿ ನಡೆಸಲಾಗುವುದು. ಅದಕ್ಕೂ ಪೂರ್ವ ಮಹಿಳೆಯರಿಗೆ ಉದ್ಯಮಶೀಲತೆ ಗುಣಗಳನ್ನು ತಿಳಿಸುವ ಉದ್ದೇಶದಿಂದ ಕಾರ್ಯಾಗಾರ ಏರ್ಪಡಿಸಲಾಗಿದೆ. ಬೇಕರಿ ಉತ್ಪನ್ನಗಳನ್ನು ತಯಾರಿಸುವ ಮಹಿಳೆಯರಿಗೆ ಮಾರುಕಟ್ಟೆ ಸಂಪರ್ಕದ ಬಗ್ಗೆ ಮಾಹಿತಿ ನೀಡಲಾಗುವುದು ಎಂದರು.`ಅವೇಕ್' ಗುಲ್ಬರ್ಗ ಜಿಲ್ಲೆಯ ಪ್ರತಿನಿಧಿಗಳಾದ ಆರ್.ಎಸ್. ವಿಜಯಲಕ್ಷ್ಮೀ, ಆನಂದಿ ವೆಂಕಟೇಶ ಹಾಗೂ ಜಿಲ್ಲಾ ಪಂಚಾಯಿತಿ ನಿವೃತ್ತ ಅಧಿಕಾರಿ ಶಶಿಕಲಾ ಮಂಗಳವಾರಕರ್ ಇದ್ದರು.

ಪ್ರತಿಕ್ರಿಯಿಸಿ (+)