ಶನಿವಾರ, ಜನವರಿ 18, 2020
19 °C

‘ನಕಲಿ ವೈದ್ಯರಿಗೆ ಕಡಿವಾಣ ಹಾಕಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಲ್ಬರ್ಗ: ನಕಲಿ ವೈದ್ಯರ ಹಾವಳಿಗೆ ಕಡಿವಾಣ ಹಾಕಲು ವಿಫಲರಾದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯನ್ನು ವರ್ಗಾವಣೆ ಮಾಡಬೇಕು ಮತ್ತು ನಕಲಿ ವೈದ್ಯರನ್ನು ನಿರ್ಮೂಲನೆ ಮಾಡಬೇಕು ಎಂದು ಆಗ್ರಹಿಸಿ ವೀರ ಕನ್ನಡಿಗರ ಸೇನೆಯು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿತು.ಪರವಾನಗಿ ಇಲ್ಲದೆ ಖಾಸಗಿ ಆಸ್ಪತ್ರೆಗಳಲ್ಲಿ ವಾರ್ಡ್‌ಬಾಯ್‌ ಆಗಿ ಕೆಲಸ ಮಾಡಿ, ನಂತರ ವೈದ್ಯರೆಂದು ಹೇಳಿಕೊಂಡು ನಗರ, ತಾಲ್ಲೂಕು ಮತ್ತು ಹಳ್ಳಿಗಳಲ್ಲಿ ಆಸ್ಪತ್ರೆ ಸ್ಥಾಪಿಸಿ ಹಣ ವಸೂಲಿ ಮಾಡುತ್ತಿದ್ದಾರೆ. ಇದರಿಂದ ಮುಗ್ಧ ಜನರ ವಂಚನೆ ಅಷ್ಟೇ ಆಗುವುದಲ್ಲದೇ ಅವರ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುತ್ತದೆ. ಇದಕ್ಕೆ ಶೀಘ್ರ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದ್ದಾರೆ.ನಕಲಿ ವೈದ್ಯರ ಹಾವಳಿಗೆ ಕಡಿವಾಣ ಹಾಕಲು ಹಲವಾರು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊ ಳ್ಳದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯನ್ನು ವರ್ಗಾವಣೆ ಮಾಡಬೇಕು. ನಿಷ್ಠಾವಂತ ಅಧಿಕಾರಿಯನ್ನು ನೇಮಕ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.ವೀರ ಕನ್ನಡಿಗರ ಸೇನೆಯ ಸಂಸ್ಥಾಪಕ ಅಧ್ಯಕ್ಷ ಅಮೃತ ಪಾಟೀಲ ಸಿರನೂರ, ಜಗನ್ನಾಥ ಸೂರ್ಯವಂಶಿ, ರವಿ ಒಂಟಿ, ದತ್ತು ಭಾಸಗಿ, ಸಿದ್ದು ಕಂದಗಲ, ಹಣಮಂತ ಸುಲ್ತಾನಪುರ, ಸಂತೋಷ ತಳವಾರ, ಪ್ರಶಾಂತ ಚವಾಣ್‌, ರಾಮಾ ಪೂಜಾರಿ, ಶಿವಾಜಿ ಚವಾಣ್‌, ಅಮೀತ ಪಾಟೀಲ, ಅವಿನಾಶ ರೆಡ್ಡಿ ಇದ್ದರು.

ಪ್ರತಿಕ್ರಿಯಿಸಿ (+)