ಬಿಡಿಎ ಅಧ್ಯಕ್ಷ ಸ್ಥಾನದ ಮೇಲೆ ಕೈ ಶಾಸಕರಿಬ್ಬರ ಕಣ್ಣು

7

ಬಿಡಿಎ ಅಧ್ಯಕ್ಷ ಸ್ಥಾನದ ಮೇಲೆ ಕೈ ಶಾಸಕರಿಬ್ಬರ ಕಣ್ಣು

Published:
Updated:
ಬೈರತಿ ಸುರೇಶ್

ಬೆಂಗಳೂರು: ‘ಪ್ರಭಾವಿ’ ನಿಗಮ ಮಂಡಳಿಗಳಿಗೆ ಕೈ ಪಕ್ಷದಲ್ಲಿ ಲಾಬಿ ತೀವ್ರಗೊಂಡಿದ್ದು, ಇಬ್ಬರು ಶಾಸಕರು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ.

ಈ ಪೈಕಿ ಒಬ್ಬರು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಹೆಬ್ಬಾಳ ಶಾಸಕ ಬೈರತಿ ಸುರೇಶ್. ಇನ್ನೊಬ್ಬರು ಇತ್ತೀಚಿನವರೆಗೂ ಸಿದ್ದರಾಮಯ್ಯ ಆಪ್ತರಾಗಿದ್ದು, ಸಚಿವಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಮುನಿಸಿಕೊಂಡಿರುವ ಹೊಸಕೋಟೆ ಶಾಸಕ ಎಂ.ಟಿ.ಬಿ ನಾಗರಾಜ್.

ಸಿದ್ದರಾಮಯ್ಯ ಅವರು ಸುರೇಶ್‌ ಅವರಿಗೆ ಬಿಡಿಎ ಅಧ್ಯಕ್ಷ ಸ್ಥಾನ ದೊರಕಿಸಿಕೊಡಲು ನೆರವಾಗುವ ಸಾಧ್ಯತೆ ಇದೆ. ಆದರೆ, ನಾಗರಾಜ್‌ ಅವರಿಗೂ ಬೇರೊಂದು ಉತ್ತಮ ಸ್ಥಾನದಲ್ಲಿ ಅವಕಾಶ ಕಲ್ಪಿಸಬಹುದು ಎಂದು ಹೇಳಲಾಗಿದೆ.

ಈ ಮಧ್ಯೆ, ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ, ಬಿಡಿಎ ಹಿಡಿತದಲ್ಲಿಟ್ಟುಕೊಳ್ಳುವ ಉದ್ದೇಶದಿಂದ ತಮ್ಮ ಆಪ್ತರಿಗೆ ಕೊಡಿಸಲು ಪ್ರಯತ್ನಿಸಬಹುದು ಎಂಬ ಮಾತು ಕಾಂಗ್ರೆಸ್‌ ವಲಯದಲ್ಲಿದೆ.

ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಎಸ್.ಆರ್. ಪಾಟೀಲ ಹೆಸರನ್ನು ಕಾಂಗ್ರೆಸ್‌ ಮುನ್ನೆಲೆಗೆ ತಂದಿದೆ. ಕೆಪಿಸಿಸಿ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ಈಗಾಗಲೇ ನೇಮಕಗೊಂಡಿದ್ದಾರೆ. ಇಬ್ಬರೂ ಸಿದ್ದರಾಮಯ್ಯ ಆಪ್ತರು. ಹೀಗಾಗಿ, ತಮ್ಮ ಪರ ಇರುವ ಶಾಸಕರೊಬ್ಬರ ಹೆಸರನ್ನು ಬಿಡಿಎ ಅಧ್ಯಕ್ಷ ಸ್ಥಾನಕ್ಕೆ ಪರಮೇಶ್ವರ ಸೂಚಿಸುವ ಸಾಧ್ಯತೆ ಇದೆ ಎಂಬ ಮಾತು ಪಕ್ಷದ ಆಂತರಿಕ ವಲಯದಲ್ಲಿ ಹರಿದಾಡುತ್ತಿದೆ.

Tags: 

ಬರಹ ಇಷ್ಟವಾಯಿತೆ?

 • 3

  Happy
 • 1

  Amused
 • 0

  Sad
 • 1

  Frustrated
 • 3

  Angry

Comments:

0 comments

Write the first review for this !