ಸಂಘಟನೆಯಿಂದ ಅಭಿವೃದ್ಧಿ ಸಾಧ್ಯ: ತಂಗಡಗಿ

ಜೇವರ್ಗಿ: ಸಂಘಟಿತ ಹೋರಾಟದಿಂದ ಸಮಾಜದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ. ಆ ನಿಟ್ಟಿನಲ್ಲಿ ಸಮಾಜದ ಬಾಂಧವರು ಪಟ್ಟಣದಲ್ಲಿ ಶಿವಯೋಗಿ ಸಿದ್ಧರಾಮೇಶ್ವರರ ಜಯಂತ್ಯುತ್ಸವ ಕಾರ್ಯಕ್ರಮ ಆಯೋಜಿಸಿರುವುದು ಶ್ಲಾಘನೀಯ’ ಎಂದು ಸಣ್ಣ ನೀರಾವರಿ ಸಚಿವ ಶಿವರಾಜ್ ತಂಗಡಗಿ ಹೇಳಿದರು.
ಅವರು ಶನಿವಾರ ಪಟ್ಟಣದ ಹಳೆ ತಹಶೀಲ್ದಾರ್ ಕಚೇರಿ ಆವರಣದಲ್ಲಿ ತಾಲ್ಲೂಕು ಭೋವಿ (ವಡ್ಡರ್) ಸಮಾಜದ ವತಿಯಿಂದ ಆಯೋಜಿಸಿದ್ದ ಶ್ರೀ ಶಿವಯೋಗಿ ಸಿದ್ಧರಾಮೇಶ್ವರರ 841ನೇ ಜಯಂತ್ಯುತ್ಸವ ಹಾಗೂ ತಾಲ್ಲೂಕು ಭೋವಿ ವಡ್ಡರ್ ಸಮಾಜದ ಬೃಹತ್ ಜನಜಾಗೃತಿ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.
’ರಾಜ್ಯಾದ್ಯಂತ್ ಭೋವಿ ಸಮಾಜದ ಸಂಘಟನೆ ಕಾರ್ಯ ಆರಂಭವಾಗಿದೆ. ರಾಜ್ಯದ ಪ್ರತಿ ಜಿಲ್ಲೆ ಹಾಗೂ ಪ್ರತಿ ತಾಲ್ಲೂಕು ಕೇಂದ್ರಗಳಲ್ಲಿ ಸಮಾಜದ ಬಾಂಧವರು ಇಂಥಹ ಸಮಾವೇಶವನ್ನು ಆಯೋಜಿಸಿ ಜನಜಾಗೃತಿ ಮೂಡಿಸಬೇಕು. ಸಮಾಜವನ್ನು ಗುರು-ತಿಸಿದ್ದರಿಂದಲೇ ನನಗೆ ರಾಜ್ಯ ಸರ್ಕಾರದಲ್ಲಿ ಸಚಿವ ಸ್ಥಾನ ದೊರಕಿದೆ’ ಎಂದ ಅವರು, ’ರಾಜ್ಯ ಸರ್ಕಾರ ಭೋವಿ ಸಮಾಜದ ಅಭಿವೃದ್ಧಿಗೆ ಪ್ರತಿ ತಾಲ್ಲೂಕಿಗೆ ₨25ಲಕ್ಷ ಅನುದಾನ ಬಿಡುಗಡೆ ಮಾಡಿದೆ’ ಎಂದರು.
ಅಧ್ಯಕ್ಷತೆ ವಹಿಸಿದ್ದ ಶಾಸಕ ಅಜಯಸಿಂಗ್, ಪಟ್ಟಣದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಭೋವಿ ಸಮಾಜದ ಸಮುದಾಯ ಭವನಕ್ಕೆ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ 10ಲಕ್ಷ ಅನುದಾನ ಬಿಡುಗಡೆ ಮಾಡುವೆ’ ಎಂದು ತಿಳಿಸಿದರು. ಬಾಗಲಕೋಟೆ ಹಾಗೂ ಚಿತ್ರದುರ್ಗದ ಭೋವಿ ಗುರುಪೀಠದ ಸಿದ್ಧರಾಮೇಶ್ವರ ಸ್ವಾಮೀಜಿ, ಸೊನ್ನದ ಶಿವಾನಂದ ಸ್ವಾಮೀಜಿ, ಚಿಗರಳ್ಳಿಯ ಸಿದ್ಧಬಸವ ಕಬೀರ್ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು
ಶಾಸಕ ಮಾನಪ್ಪ ವಜ್ಜಲ್ ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ, ಜಿಡಿಸಿಸಿ ಬ್ಯಾಂಕ್ ನಿರ್ದೇಶಕ ಕೇದಾರಲಿಂಗಯ್ಯ ಹಿರೇಮಠ, ಸಮಾಜದ ಜಿಲ್ಲಾಧ್ಯಕ್ಷ ಸುಭಾಷ ಪವಾರ, ಮಲ್ಲಿಕಾರ್ಜುನ ಕುಸ್ತಿ, ಸೋಮಯ್ಯ ಗುತ್ತೇದಾರ್, ರಾಜಶೇಖರ ಸೀರಿ, ಶಿವರಾಜ್ ಪಾಟೀಲ್, ಶಾಂತಗೌಡ ದುಮ್ಮದ್ರಿ, ಖಾಸಿಂಪಟೇಲ್ ಮುದವಾಳ ಅತಿಥಿಗಳಾಗಿ ದ್ದರು. ಪ್ರಾಧ್ಯಾಪಕಿ ಭಾಗ್ಯಮ್ಮ ವೈಷ್ಣವಿ, ತಾಲ್ಲೂಕು ಕಸಾಪ ಅಧ್ಯಕ್ಷ ಶಿವಕವಿ ಹಿರೇಮಠ ಜೋಗೂರ ಉಪನ್ಯಾಸ ನೀಡಿದರು.
ಭೋವಿ ಸಮಾಜದ ಜಿಲ್ಲಾ ಉಪಾಧ್ಯಕ್ಷ ರಾಜು ವ್ಹಿ.ಗುತ್ತೇದಾರ್ ಭೋವಿ ಸಮಾಜದ ತಾಲ್ಲೂಕು ಅಧ್ಯಕ್ಷ ಶಿವಕುಮಾರ ಗುತ್ತೇದಾರ್, ಸೋಮಯ್ಯ ಗುತ್ತೇದಾರ್, ನಾಗಪ್ಪ ಅರಳಗುಂಡಗಿ, ತಿಮ್ಮಯ್ಯ ಮಂಜುಳಕರ್, ಹಣಮಂತ ಬಿಳವಾರ, ಭೀಮಯ್ಯ ಗುತ್ತೇದಾರ್, ಭೋವಿ ಸಮಾಜದ ಬಾಂಧವರು, ಮಹಿಳೆಯರು ಪಾಲ್ಗೊಂಡಿದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.