ಮಂಗಳವಾರ, ಜೂನ್ 15, 2021
22 °C

ಸೀಟು ಮಾರಾಟ: ಕ್ರಮಕ್ಕೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಲ್ಬರ್ಗ: ರಾಜ್ಯದಲ್ಲಿ ಹಲವಾರು ಭಾಷಾ ಹಾಗೂ ಧಾರ್ಮಿಕ ಅಲ್ಪ ಸಂಖ್ಯಾತ ಕಾಲೇಜುಗಳಿದ್ದು, ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಅನುಕೂಲವಾಗ ಲೆಂದು ಮೆಡಿಕಲ್‌ ಸೀಟು ಹಂಚಿಕೆ ಯಲ್ಲಿ ಹೆಚ್ಚಿನ ಮೀಸಲಾತಿ ನೀಡಲಾ ಗುತ್ತಿದೆ. ಆದರೆ, ಸರ್ಕಾರದ ಸೀಟು ಹಂಚಿಕೆಯ ಎಲ್ಲ ನಿಯಮಗಳನ್ನು ಗಾಳಿಗೆ ತೂರಿ,  ವಿದ್ಯಾರ್ಥಿಗಳ ಸೀಟು ಗಳನ್ನು ಮಾರಿಕೊಳ್ಳುತ್ತಿರುವ ಕಾಲೇ ಜುಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳ ಬೇಕು ಎಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ಸದ ಸ್ಯರು ವೈದ್ಯಕೀಯ ಶಿಕ್ಷಣ ಸಚಿವರಿಗೆ ಮಂಗಳವಾರ ಮನವಿ ಸಲ್ಲಿಸಿದರು.ಕಾಲೇಜುಗಳು ಅಲ್ಪಸಂಖ್ಯಾತ ಸಮು ದಾಯಗಳ ಹಿತ ಕಡೆಗಣಿಸುತ್ತಿವೆ. ಇದರಿಂದ ಬಡ ವಿದ್ಯಾರ್ಥಿಗಳಿಗೆ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಿಗಬೇಕಾದ ಸೀಟುಗಳು ಮಾರಾಟ ವಾಗುತ್ತಿವೆ. ಈ ಅಕ್ರಮದ ವಿರುದ್ಧ ಸರ್ಕಾರ ಉನ್ನತ ಮಟ್ಟದ ತನಿಖೆ ನಡೆಸಿ ಕಾಲೇಜುಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ.ಅಲ್ಲದೇ ವೈದ್ಯಕೀಯ ಶಿಕ್ಷಣ ಇಲಾಖೆ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚಿಸಿ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕು, ವಿದ್ಯಾರ್ಥಿಗಳಿಗೆ ವಂಚಿಸಿದ ಕಾಲೇಜುಗಳ ಸ್ಥಾನಮಾನ ರದ್ದು ಪಡಿಸಬೇಕು, ಸರ್ಕಾರವೇ ಸಿಇಟಿ ಮೂಲಕ ಸೀಟು ಹಂಚಿಕೆ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.