ಮಂಗಳವಾರ, ಜೂನ್ 22, 2021
27 °C

24 ಗಂಟೆ ಕಾರ್ಯ: ಫ್ಲೈಯಿಂಗ್ ಸ್ಕ್ವಾಡ್‌ಗೆ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಲ್ಬರ್ಗ: ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ ೩ರಂತೆ ಫ್ಲೈಯಿಂಗ್ ಸ್ಕ್ವಾಡ್‌ಗಳನ್ನು ನೇಮಿಸ ಲಾಗಿದ್ದು, ಈ ತಂಡಗಳು ಚುನಾವಣಾ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸುವಲ್ಲಿ ದಿನದ ೨೪ ಗಂಟೆಗಳ ಕಾಲ ಕರ್ತವ್ಯ ನಿರ್ವ ಹಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ.ಎನ್.ವಿ. ಪ್ರಸಾದ್‌  ತಿಳಿಸಿದರು.ಸೋಮವಾರ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಚುನಾವಣಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಫ್ಲೈಯಿಂಗ್ ಸ್ಕ್ವಾಡ್ ತಂಡದ ಮುಖ್ಯಸ್ಥರು ಚುನಾವಣಾ ನೀತಿ ಸಂಹಿತೆಯಲ್ಲಿ ಪಾಲಿಸ ಬೇಕಾದ ನಿಯಮಗಳನ್ನು ತಿಳಿದುಕೊಂಡು ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ಕಂಡುಬಂ ದಲ್ಲಿ ತಕ್ಷಣ ಪ್ರಕರಣ ದಾಖಲಿಸುಂತೆ ತಿಳಿಸಿದರು.ಫ್ಲೈಯಿಂಗ್ ಸ್ಕ್ವಾಡ್ ತಂಡವು ಕರ್ತವ್ಯ ನಿರ್ವಹಿಸುವ ವರದಿಯನ್ನು ಮರುದಿನ ಬೆಳಿಗ್ಗೆ ೧೦ ಗಂಟೆಯೊಳಗಾಗಿ ಆಯಾ ತಾಲ್ಲೂಕಿನ ತಹಶೀಲ್ದಾರ್ ಕಚೇರಿಯಲ್ಲಿ ನಿಗದಿತ ನಮೂನೆಯಲ್ಲಿ ಸಲ್ಲಿಸಬೇಕು. ತಹಶೀಲ್ದಾರ್‌ ಕಚೇರಿಯಿಂದ ಜಿಲ್ಲಾ ಚುನಾವಣಾಧಿಕಾರಿಗೆ ೧೦.೩೦ರೊಳಗಾಗಿ ವರದಿ ತಲುಪುವಂತೆ ಎಚ್ಚರಿಕೆ ವಹಿಸಬೇಕು ಎಂದರು.ಸ್ಟ್ಯಾಟಿಕ್ ಸರ್ವೇಲೆನ್ಸ್ ತಂಡಗಳು ನೀತಿ ಸಂಹಿತೆ ಜಾರಿಯಾದಾಗಿನಿಂದ ಕರ್ತವ್ಯದಲ್ಲಿದ್ದು  ಚೆಕ್ ಪೋಸ್ಟ್‌ಗಳಲ್ಲಿ ಕಾರ್ಯನಿರ್ವಹಿಸುತ್ತಿವೆ. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ಯಾವುದಾದರೂ ಸಂಶಯ ಬಂದಲ್ಲಿ ಈ ತಂಡಗಳು ತಕ್ಷಣ ಕಾರ್ಯೋ ನ್ಮುಖರಾಗಬೇಕು. ಯಾವುದೇ ದಾಖಲೆಗಳಿಲ್ಲದೆ ೫೦ ಸಾವಿರಕ್ಕಿಂತ ಹೆಚ್ಚಿನ ಹಣವನ್ನು ಸಾಗಿಸುತ್ತಿದ್ದರೆ, ಅಂತಹವರನ್ನು ಕಂಡುಹಿಡಿದು ಕ್ರಮ ಜರುಗಿಸಬೇಕು. ಸಂಶಯಾಸ್ಪದವಾಗಿ ಹಣ ಇಟ್ಟುಕೊಂಡಿರುವುದು ಕಂಡುಬಂದಲ್ಲಿ ಸೂಕ್ತ ಕ್ರಮ ಜರುಗಿಸಬೇಕು. ಸ್ಟಾರ್ ಕ್ಯಾಂಪೇನರ್ ಆಗಮಿಸಿದಾಗ ಅವರ ಹತ್ತಿರ ಒಂದು ಲಕ್ಷದವರೆಗೆ ಹಣವಿದ್ದಲ್ಲಿ ತೊಂದರೆಯಿಲ್ಲ. ಇದಕ್ಕಿಂತಲೂ ಹೆಚ್ಚಿಗೆ ಹಣವಿದ್ದರೆ ಆದಾಯ ತೆರಿಗೆ ಅಧಿಕಾರಿಗಳಿಗೆ ದೂರು ಸಲ್ಲಿಸಬೇಕು ಎಂದರು.ಅಬಕಾರಿ ಇಲಾಖೆಯ ಜಿಲ್ಲಾ ಅಧಿಕಾರಿಗಳು ಚಿಲ್ಲರೆ ಮದ್ಯ ಮಾರಾಟ ಮಾಡುವವರ ಮಳಿಗೆಗಳನ್ನು ತಪಾಸಣೆ ಮಾಡಬೇಕು. ಪ್ರತಿ ದಿನ ಮದ್ಯ ಮಾರಾಟದ ಮೇಲೆ ನಿಗಾ ವಹಿಸ ಬೇಕು. ಮದ್ಯ ತಯಾರಿಸುವ ಕಂಪನಿ ಗಳಿಂದ ಪ್ರತಿ ದಿನ ವರದಿ ಪಡೆಯಬೇಕು. ತಾಲ್ಲೂಕಿ ಗೊಂದು ತಂಡ ರಚಿಸಿ ತಪಾಸಣೆ ಕೈಗೊಂಡು ಪ್ರತಿದಿನ ವರದಿ ನೀಡುವಂತೆ ತಿಳಿಸಿದರು.ಆಯುಧ ಲೈಸನ್ಸ್ ಹೊಂದಿದವರು ೨-೩ ದಿನಗಳಲ್ಲಿ ತಮ್ಮ ಆಯುಧಗಳನ್ನು ಸಂಬಂಧ ಪಟ್ಟ ಪೊಲೀಸ್ ಠಾಣೆಗಳಲ್ಲಿ ಆಯುಧವನ್ನು ಸಲ್ಲಿಸಿ ಸ್ವೀಕೃತಿ ಪಡೆದುಕೊಳ್ಳಬೇಕು. ಆಯುಧ ಗಳ ಅವಶ್ಯಕತೆಯಿದ್ದವರು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿರುವ ಸಮಿತಿಗೆ ಕಾರಣದೊಂದಿಗೆ ಮನವಿ ಸಲ್ಲಿಸಬೇಕು ಎಂದರು.ಚುನಾವಣಾ ನೀತಿ ಸಂಹಿತೆ ಜಾರಿಯಾಗು ವುದಕ್ಕಿಂತ ಮುಂಚೆ ಹಮ್ಮಿಕೊಂಡಿರುವ ಕಾಮಗಾರಿಗಳನ್ನು ಮುಂದು ವರೆಸಬಹು ದಾಗಿದೆ. ಬರಗಾಲ, ನೆರೆ, ನೈಸರ್ಗಿಕ ವಿಕೋಪ ಗಳು ಸಂಭವಿಸಿದಾಗ ಪರಿಹಾರ ಕಾಮಗಾರಿ ಗಳನ್ನು ನೀತಿ ಸಂಹಿತೆ ಜಾರಿಯಿದ್ದಾಗಲೂ ಕ್ರಮ ಕೈಗೊಳ್ಳಲು ಅವಕಾಶಗಳಿವೆ. ಅತೀ ಅನಾರೋಗ್ಯ ದಿಂದ ಬಳಲುತ್ತಿರುವ ವ್ಯಕ್ತಿಯ ವೈದ್ಯಕೀಯ ವೆಚ್ಚವನ್ನು ಭರಿಸಬಹುದಾಗಿದೆ ಎಂದರು.ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಸಿಂಗ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಚುನಾವಣಾ ನೋಡಲ್ ಅಧಿಕಾರಿ ಟಿ.ಎಚ್.ಎಂ. ಕುಮಾರ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾಶಿನಾಥ ತಳಕೇರಿ, ಎಎಸ್‌ಪಿ ಸಂತೋಸ್‌ ಬಾಬು , ಹೆಚ್ಚುವರಿ ಜಿಲ್ಲಾಧಿಕಾರಿ ಗೋವಿಂದರೆಡ್ಡಿ,  ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.