ಶುಕ್ರವಾರ, 20–5–1994

ಗುರುವಾರ , ಜೂನ್ 27, 2019
29 °C

ಶುಕ್ರವಾರ, 20–5–1994

Published:
Updated:

ಅಣ್ವಸ್ತ್ರ ಪ್ರಸರಣ ನಿಷೇಧ: ಭಾರತ–ಅಮೆರಿಕ ಸಹಮತ ಇಲ್ಲ– ಕ್ಲಿಂಟನ್

ವಾಷಿಂಗ್ಟನ್, ಮೇ 19– ‘ಅಣ್ವಸ್ತ್ರ ಪ್ರಸರಣ ನಿಷೇಧಕ್ಕೆ ಸಂಬಂಧಿಸಿದಂತೆ ಭಾರತ ಮತ್ತು ಅಮೆರಿಕದ ಮಧ್ಯೆ ಭಿನ್ನಾಭಿಪ್ರಾಯಗಳು ಕಡಿಮೆಯಾಗಿಲ್ಲ’ ಎಂದು ಅಮೆರಿಕದ ಅಧ್ಯಕ್ಷ ಬಿಲ್ ಕ್ಲಿಂಟನ್ ಇಂದು ಇಲ್ಲಿ ಹೇಳಿದರು. ಆದರೆ ಈ ವಿವಾದಾತ್ಮಕ ವಿಷಯದ ಬಗ್ಗೆ ಚರ್ಚೆಯನ್ನು ಮುಂದುವರಿಸುವುದಾಗಿ ಅವರು ತಿಳಿಸಿದರು.

ಎರಡೂವರೆ ಗಂಟೆಗಳ ಕಾಲ ಮಾತುಕತೆ ನಡೆಸಿದ ಬಳಿಕ ಪ್ರಧಾನಿ ಪಿ.ವಿ. ನರಸಿಂಹರಾವ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು. ಮಾನವ ಹಕ್ಕು ಮತ್ತು ಅಣ್ವಸ್ತ್ರ ವಿಷಯಗಳ ಮೇಲೆ ಉಭಯ ನಾಯಕರಲ್ಲಿ ಭಿನ್ನಾಭಿಪ್ರಾಯಗಳು ಉಳಿದಿದ್ದರೂ ಪರಸ್ಪರ ಮಾತುಕತೆ ನಡೆಸುವ ಮೂಲಕ ಅವುಗಳನ್ನು ಬಗೆಹರಿಸಿಕೊಳ್ಳಬಹುದು. ಅಣ್ವಸ್ತ್ರ ಪರೀಕ್ಷೆ ನಿಷೇಧದ ಬಗ್ಗೆ ಉಭಯ ದೇಶಗಳು ಒಂದು ಒಪ್ಪಂದಕ್ಕೆ ಬಂದಿವೆ ಎಂದು ಕ್ಲಿಂಟನ್ ತಿಳಿಸಿದರು.

ಚುನಾವಣಾ ಕಾಯಿದೆ: ಶೇಷನ್ ಕೋರ್ಟಿಗೆ?

ನವದೆಹಲಿ, ಮೇ 19 (ಯುಎನ್‌ಐ)– ಕೇಂದ್ರ ಸರ್ಕಾರ ಚುನಾವಣಾ ಕಾಯಿದೆ ಯಲ್ಲಿ ತರಲುದ್ದೇಶಿಸಿರುವ ತಿದ್ದುಪಡಿಗಳ ವಿರುದ್ಧ ತಾವು ಸುಪ್ರೀಂ ಕೋರ್ಟಿನಲ್ಲಿ ಮನವಿ ಸಲ್ಲಿಸುವ ಸಂಭವವಿದೆ ಎಂದು ಚುನಾವಣಾ ಆಯೋಗದ ಮುಖ್ಯಸ್ಥ ಟಿ.ಎನ್. ಶೇಷನ್ ಅವರು ‘ಐ ವಿಟ್ನೆಸ್’ ವಿಡಿಯೋ ಪತ್ರಿಕೆಗೆ ನೀಡಿದ ಸಂದರ್ಶನ
ದಲ್ಲಿ ತಿಳಿಸಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !