ಬುಧವಾರ, 23–2–1994

ಬುಧವಾರ, ಮೇ 22, 2019
24 °C
94

ಬುಧವಾರ, 23–2–1994

Published:
Updated:

* ಪಾಕ್ ಅಕೃತ್ಯಗಳ ವಿರುದ್ಧ ಎಚ್ಚರಿಕೆ

ನವದೆಹಲಿ, ಫೆ. 22 (ಪಿಟಿಐ, ಯುಎನ್ಐ)– ಭಾರತದ ನೆಲದಲ್ಲಿ ಪಾಕಿಸ್ತಾನವು ಭಯೋತ್ಪಾದಕ ಚಟುವಟಿಕೆಗಳಿಗೆ ನೀಡುತ್ತಿರುವ ಬೆಂಬಲವನ್ನು ಸಂಸತ್ತಿನ ಉಭಯ ಸದನಗಳೂ ಇಂದು ಪ್ರಬಲವಾಗಿ ಖಂಡಿಸಿವೆ. ದೇಶದ ಏಕತೆ ಹಾಗೂ ಭೌಗೋಳಿಕ ಸಮಗ್ರತೆಯನ್ನು ಕೆದಕುವ ಗಡಿಯಾಚೆಯ ಹಾಗೂ ಇತರ ಯಾವುದೇ ರೀತಿಯ ಪ್ರಯತ್ನಗಳನ್ನೂ ಎದುರಿಸಲು ಭಾರತವು ಸಮರ್ಥವಾಗಿದೆ ಎಂದು ಸರ್ವಾನುಮತದಿಂದ ಅಂಗೀಕರಿಸಿದ ನಿರ್ಣಯದಲ್ಲಿ ಪಾಕಿಸ್ತಾನಕ್ಕೆ ಸ್ಪಷ್ಟ ಉತ್ತರ ನೀಡಲಾಗಿದೆ.

* ಮಲ ತಿನ್ನಿಸಿದ ಪ‍್ರಕರಣ ಸಂಸತ್ತಿನಲ್ಲಿ ಪ್ರತಿಧ್ವನಿ

ನವದೆಹಲಿ, ಫೆ. 22– ಕೋಲಾರ ಜಿಲ್ಲೆಯ ಹರಟಿ ಗ್ರಾಮದಲ್ಲಿ ಪರಿಶಿಷ್ಟ ಜಾತಿ ವ್ಯಕ್ತಿಯೊಬ್ಬನಿಗೆ ಮಲ ತಿನ್ನಿಸಿದರೆನ್ನಲಾದ ಪ್ರಕರಣ ಇಂದು ಲೋಕಸಭೆಯಲ್ಲಿ ಪ್ರತಿಧ್ವನಿಸಿತು.

ಶೂನ್ಯ ವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಜನತಾ ದಳದ ರಾಂ ವಿಲಾಸ್ ಪಾಸ್ವಾನ್, ತಾವು ಕರ್ನಾಟಕಕ್ಕೆ ಹೋಗಿ ಆ ಸ್ಥಳಕ್ಕೆ ಭೇಟಿ ನೀಡಿದಾಗ ಕಣ್ಣಪ್ಪ ಎಂಬ ವ್ಯಕ್ತಿಯ ಮೇಲೆ ದೌರ್ಜನ್ಯ ನಡೆಸಿ, ಆತನಿಗೆ ಮಲ ತಿನ್ನಿಸಿರುವ ಘಟನೆ ನಡೆದಿರುವುದು ತಿಳಿದುಬಂದಿದೆ. ಈ ಬಗ್ಗೆ ಕೇಂದ್ರ ಸರ್ಕಾರ ತುರ್ತಾಗಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಪಡಿಸಿದರು.

ಕರ್ನಾಟಕ ಮತ್ತು ಉತ್ತರ ಪ್ರದೇಶದಲ್ಲಿ ಪರಿಶಿಷ್ಟರಿಗೆ ಮತ್ತು ಮಹಿಳೆಯರಿಗೆ ರಕ್ಷಣೆಯೇ ಇಲ್ಲದಂತಾಗಿದೆ ಎಂದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !