ನಿಯಮ ಉಲ್ಲಂಘನೆ: ಶಾಲಾ ವಾಹನಗಳ ಜಪ್ತಿ

7

ನಿಯಮ ಉಲ್ಲಂಘನೆ: ಶಾಲಾ ವಾಹನಗಳ ಜಪ್ತಿ

Published:
Updated:

ಬೆಂಗಳೂರು: ನಗರದಲ್ಲಿ ಬುಧವಾರ ವಿಶೇಷ ಕಾರ್ಯಾಚರಣೆ ನಡೆಸಿದ ಸಾರಿಗೆ ಇಲಾಖೆ ಅಧಿಕಾರಿಗಳು, 26 ಶಾಲಾ ವಾಹನಗಳನ್ನು ಜಪ್ತಿ ಮಾಡಿದರು.

ಮೋಟಾರು ವಾಹನ ಕಾಯ್ದೆ ಹಾಗೂ ಸುಪ್ರಿಂಕೋರ್ಟ್ ನಿರ್ದೇಶನಗಳನ್ನು ಉಲ್ಲಂಘಿಸಿ ಶಾಲಾ ವಾಹನಗಳು ಓಡಾಡುತ್ತಿದ್ದವು. ವಿಶೇಷ ತಂಡವೊಂದನ್ನು ರಚಿಸಿ ಕಾರ್ಯಾಚರಣೆ ನಡೆಸಲಾಯಿತು. 150 ವಾಹನಗಳಿಗೆ ಸಂಬಂಧಿಸಿದಂತೆ ಪ್ರಕರಣಗಳನ್ನೂ ದಾಖಲಿಸಿಕೊಳ್ಳಲಾಗಿದೆ ಎಂದು ಸಾರಿಗೆ ಅಧಿಕಾರಿಗಳು ತಿಳಿಸಿದರು.

ನಿಗದಿತ ಸಂಖ್ಯೆಗಿಂತ ಹೆಚ್ಚು ಮಕ್ಕಳನ್ನು ವಾಹನಗಳಲ್ಲಿ ಕರೆದೊಯ್ಯುತ್ತಿದ್ದ, ವಿಮೆ ಇಲ್ಲದ ಹಾಗೂ ಪರವಾನಗಿ ಇರದ ವಾಹನಗಳನ್ನು ಪತ್ತೆ ಹಚ್ಚಲಾಯಿತು. ಅವುಗಳ ಚಾಲಕರಿಗೆ ನೋಟಿಸ್‌ ಸಹ ನೀಡಲಾಗಿದೆ ಎಂದರು.  

ಶಾಲಾ ಮಕ್ಕಳನ್ನು ವಾಹನಗಳಲ್ಲಿ ಕರೆದೊಯ್ಯುವ ಸಂಬಂಧ ನಿಯಮಗಳನ್ನು ರೂಪಿಸಲಾಗಿದೆ. ಅಷ್ಟಾದರೂ ಚಾಲಕರು ಅವುಗಳನ್ನು ಪಾಲಿಸುತ್ತಿಲ್ಲ. ಅದರಿಂದಾಗಿ ಮಕ್ಕಳಿಗೆ ಅಪಾಯ ಎದುರಾಗುವ ಸಾಧ್ಯತೆ ಹೆಚ್ಚು. ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸುವಾಗ ವಾಹನಗಳ ಸುರಕ್ಷತೆ ಬಗ್ಗೆ ಗಮನಹರಿಸಬೇಕು ಎಂದು ಹೇಳಿದರು.       

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !