ಬುಧವಾರ, ಏಪ್ರಿಲ್ 14, 2021
23 °C

ಪ್ರವಾಹ: 28 ಮಂದಿ ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಇಸ್ಲಾಮಾಬಾದ್: ಪ್ರವಾಹದಿಂದಾಗಿ ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿರುವ ನೇಲೂಂ ಕಾಲುವೆ ಒಡೆದ ಪರಿಣಾಮ 28 ಜನರು ಸಾವನ್ನಪ್ಪಿದ್ದು, ಮಸೀದಿ ಹಾಗೂ ಹಲವು ಮನೆಗಳು ಕೊಚ್ಚಿಹೋಗಿವೆ.

ಲಾಸ್ವಾ ಪ್ರದೇಶದಲ್ಲಿದ್ದ 150 ಮನೆಗಳಿಗೆ ತೀವ್ರ ಹಾನಿಯಾಗಿದ್ದು, ಇಲ್ಲಿ 12ಕ್ಕೂ ಹೆಚ್ಚು ಜನರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾಗಿ ಎಕ್ಸ್‌ಪ್ರೆಸ್‌ ಟ್ರಿಬೂನ್ ಸುದ್ದಿ ಸಂಸ್ಥೆ ವರದಿ ಮಾಡಿದೆ. 52 ಜನರನ್ನು ಹೆಲಿಕಾಪ್ಟರ್‌ ಮೂಲಕ ಸುರಕ್ಷಿತ ಸ್ಥಳಕ್ಕೆ ರವಾನಿಸಲಾಗಿದೆ ಎಂದು ಪಾಕಿಸ್ತಾನ ಸೇನಾಪಡೆ ಪ್ರಕಟಣೆಯಲ್ಲಿ ತಿಳಿಸಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.