ಅಣ್ಣಾ ಬೆಂಬಲ: ಅಣಕು ಶವಯಾತ್ರೆ

7

ಅಣ್ಣಾ ಬೆಂಬಲ: ಅಣಕು ಶವಯಾತ್ರೆ

Published:
Updated:
ಅಣ್ಣಾ ಬೆಂಬಲ: ಅಣಕು ಶವಯಾತ್ರೆ

ಗುಲ್ಬರ್ಗ: ಬಲಿಷ್ಠ ಲೋಕಪಾಲ ಮಸೂದೆ ಜಾರಿಗೆ ಒತ್ತಾಯಿಸಿ ಅಣ್ಣಾ ಹಜಾರೆ 11 ದಿನಗಳಿಂದ ನಡೆಸುತ್ತಿರುವ ಉಪವಾಸ ಸತ್ಯಾಗ್ರಹಕ್ಕೆ ದಿನದಿಂದ ದಿನಕ್ಕೆ ಅಭೂತಪೂರ್ವ ಬೆಂಬಲ ದೊರೆಯುತ್ತಿದೆ.

ರಸ್ತೆತಡೆ, ಬಂದ್, ಅರೆಬೆತ್ತಲೆ ಮೆರವಣಿಗೆ, ಪ್ರತಿಭಟನಾ ಮೆರವಣಿಗೆ ನಡೆಸಿದ್ದಲ್ಲದೆ ಶೌಚಾಲಯ ಸ್ವಚ್ಛ ಮಾಡುವುದು, ತಲೆ ಬೋಳಿಸಿಕೊಳ್ಳುವ ಮೂಲಕ ವಿನೂತ ರೀತಿಯಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಇಲ್ಲಿನ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಘಟಕದ ವತಿಯಿಂದ ಶುಕ್ರವಾರ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಲಾಯಿತು.ನಗರದ ಶರಣಬಸವೇಶ್ವರ ದೇವಸ್ಥಾನದಿಂದ ಹೊರಟ ಪ್ರತಿಭಟನಾ ಮೆರವಣಿಗೆ ಅಪ್ಪನಕೆರೆ ಮೂಲಕ ಜಗತ್ ವೃತ್ತಕ್ಕೆ ಬಂದು ತಲುಪಿತು. ಅಲ್ಲಿ ಕೆಲ ಹೊತ್ತು ಮಾನವ ಸರಪಳಿ ನಿರ್ಮಿಸಿದ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.ನಂತರ ಸರ್ದಾರ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಕೇಂದ್ರ ಸರ್ಕಾರದ ಪ್ರತಿಕೃತಿ ಹೊತ್ತ ಪ್ರತಿಭಟನಾಕಾರರು ಅಣಕು ಶವಯಾತ್ರೆ ನಡೆಸಿ ಶವ ದಹನ ಕಾರ್ಯಕ್ರಮ ನಡೆಸಿದರು. ಮಂಜುನಾಥ ಮೀಸೆ ಮಾತನಾಡಿ, ಸಮಾಜದ ಎಲ್ಲ ಕ್ಷೇತ್ರಗಳಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಭ್ರಷ್ಟಾಚಾರ ಹೋಗಲಾಡಿಸಲು ಯುವಕರು ಸಜ್ಜಾಗಬೇಕು ಎಂದು ಕರೆ ನೀಡಿದರು.ಜನಲೋಕಪಾಲ ಮಸೂದೆ ವಾಪ್ತಿಗೆ ಪ್ರಧಾನಿ ಹಾಗೂ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳನ್ನು ತರಬೇಕು ಎಂದು ಹೋರಾಟ ನಡೆಸಿರುವ ಅಣ್ಣಾ ಬೆಂಬಲಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ತಿಳಿಸಿದರು.ಸಂತೋಷ ಬೆನಕನಳ್ಳಿ, ಶೇಷಾದ್ರಿ ಕುಲ್ಕರ್ಣಿ, ರಾಜೂ ತಳವಾರ, ಮಂಜು ಹತ್ತಿ, ಅರುಣ ಪಾಟೀಲ, ಕೈಲಾಸ ಸೇರಿದಂತೆ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry