ಮಂಗಳವಾರ, ಮೇ 11, 2021
27 °C

ಮಹಾರಾಷ್ಟ್ರದಿಂದ ನೀರು; ಮುನ್ನೆಚ್ಚರಿಕೆ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಲ್ಬರ್ಗ: ಮಹಾರಾಷ್ಟ್ರದ ಉಜಿನಿ ಹಾಗೂ ವೀರಭಟ್ಕರ್ ಜಲಾಶಯದಿಂದ ನೀರು ಬಿಡಲಾಗುತ್ತಿದ್ದು, ಇದರಿಂದ ಗುಲ್ಬರ್ಗ ಜಿಲ್ಲೆಯಲ್ಲಿ ಭೀಮಾ ನದಿತೀರದ ಕೆಲವು ಗ್ರಾಮಗಳು ಅಪಾಯ ಎದುರಿಸುವ ಸಾಧ್ಯತೆ ಇದೆ.ಈ ಬಗ್ಗೆ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.ಬುಧವಾರ ಇಲ್ಲಿ ಸುದ್ದಿಗಾರರ ಜತೆ ಮಾತನಾಡಿದರು. “ಮಹಾರಾಷ್ಟ್ರದ ಅಧಿಕಾರಿಗಳ ಜತೆ ಸತತ ಸಂಪರ್ಕ ಇಟ್ಟುಕೊಂಡಿದ್ದೇವೆ. ನದಿಯಲ್ಲಿ ನೀರು ಹೆಚ್ಚಳವಾಗುವ ಕುರಿತು ತೀವ್ರ ನಿಗಾ ವಹಿಸಿ, ಕಾಲಕಾಲಕ್ಕೆ ವರದಿ ನೀಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದ್ದೇನೆ” ಎಂದರು.ಹದಗೆಟ್ಟ ನಗರ:  ಅಭಿವೃದ್ಧಿ ಕಾರ್ಯಗಳು ನಡೆಯದೇ ಜನತೆ ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಪ್ರತಿಕ್ರಿಯಸಿದ ಸಚಿವರು, ಇದಕ್ಕೆ ಶೀಘ್ರ ಪರಿಹಾರ ನೀಡಲಾಗುವುದು ಎಂದು ಉತ್ತರಿಸಿದರು. ಜಲಮಂಡಳಿ, ಪಾಲಿಕೆ ಹಾಗೂ ಜೆಸ್ಕಾಂ ಮಧ್ಯೆ ಸಮನ್ವಯತೆ ಇಲ್ಲದೆ ನೀರಿನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತಿದೆ ಎಂದು ನುಡಿದರು.ಗುಲ್ಬರ್ಗ ಪಾಲಿಕೆ ಕಾರ್ಯವೈಖರಿಯನ್ನು ನ್ಯಾಯಮೂರ್ತಿ ಎನ್.ಕೆ.ಪಾಟೀಲ ಅವರು ಈಚೆಗೆ ಲೋಕ ಅದಾಲತ್‌ನಲ್ಲಿ ತರಾಟೆಗೆ ತೆಗೆದುಕೊಂಡಿರುವ ಬಗ್ಗೆ ಸುದ್ದಿಗಾರರು ತಿಳಿಸಿದಾಗ, `ನ್ಯಾಯಮೂರ್ತಿಗಳ ಸಲಹೆಯನ್ನು ಗಂಭೀರವಾಗಿ ಪರಿಗಣಿಸಿದ್ದೇನೆ. ಇನ್ನು ಮುಂದೆ ನಿಖರವಾದ ತೀರ್ಮಾನ ತೆಗೆದುಕೊಂಡು ಅಭಿವೃದ್ಧಿ ಕಾಮಗಾರಿ ನಿರ್ವಹಿಸಲು ಸೂಚಿಸುತ್ತೇನೆ~ ಎಂದರು.ಸಂಪುಟ ಸಭೆ: ಗುಲ್ಬರ್ಗದಲ್ಲಿ ಸಂಪುಟ ಸಭೆ ನಡೆಸುವಂತೆ ತಾವು ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರಲ್ಲಿ ಮನವಿ ಮಾಡಿರುವುದಾಗಿ ತಿಳಿಸಿದ ಸಚಿವ ಬೊಮ್ಮಾಯಿ, ಇನ್ನೊಮ್ಮೆ ಈ ಬಗ್ಗೆ ಸಮಾಲೋಚನೆ ನಡೆಸುವುದಾಗಿ ಹೇಳಿದರು. ಸೆ. 17ರಂದು ಹೈದರಾಬಾದ ಕರ್ನಾಟಕ ವಿಮೋಚನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಪಾಲ್ಗೊಳ್ಳಲಿದ್ದಾರೆ ಎಂದೂ ತಿಳಿಸಿದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.