ಶುಕ್ರವಾರ, ಮೇ 14, 2021
32 °C

ಮಕ್ಕಳ ವಿಕಾಸಕ್ಕೆ ಕ್ರೀಡೆ ಅಗತ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸೇಡಂ: ಭಾವೈಕ್ಯ ಮೂಡಿಸುವುದರಲ್ಲಿ ಕ್ರೀಡಾಕೂಟಗಳು ಪ್ರಮುಖ ಪಾತ್ರಗಳು ವಹಿಸುತ್ತವೆ ಎಂದು ಶಾಸಕ ಡಾ. ಶರಣಪ್ರಕಾಶ ಪಾಟೀಲ ಊಡಗಿ ಅಭಿಪ್ರಾಯಪಟ್ಟರು.ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮತ್ತು ತಾಲ್ಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಜಂಟಿಯಾಗಿ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.ಜಿಲ್ಲಾ ಪಂಚಾಯಿತಿ ಸದಸ್ಯ ಈರಾರೆಡ್ಡಿ ಪಾಟೀಲ ಹೂವಿನಬಾವಿ, ಕ್ರೀಡಾ ಜ್ಯೋತಿ ಸ್ವೀಕರಿಸಿ ಮಾತನಾಡಿ, ಸ್ಪರ್ಧಾ ಮನೋಭಾವನೆಯಿಂದ ಕ್ರೀಡೆಗಳಲ್ಲಿ ಭಾಗವಹಿಸಬೇಕು ಎಂದು ಕಿವಿಮಾತು ಹೇಳಿದರು.ನೌಕರರ ಸಂಘದ ಅಧ್ಯಕ್ಷ ಶಿವಯ್ಯೊ ಸ್ವಾಮಿ ಬಿಬ್ಬಳ್ಳಿ, ದೈಹಿಕ ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸಬೇಕೆಂದು ಮನವಿ ಮಾಡಿದರು.ಮುಖ್ಯಗುರುಗಳ ಸಂಘದ ಅಧ್ಯಕ್ಷ ನಾಗೇಂದ್ರ ನಾಟೀಕಾರ, ಶಿಕ್ಷಕರ ಪರಿಷತ್‌ನ ಅಧ್ಯಕ್ಷ ಅಶೋಕರೆಡ್ಡಿ ಚಿಲುಮೆ, ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಚನಬಸರೆಡ್ಡಿ ಕಿಷ್ಠಾಪೂರ, ಉಪ ಪ್ರಾಂಶುಪಾಲ ಡಿ.ಎಸ್. ಓಂಕಾರ, ದೈಹಿಕ ಶಿಕ್ಷಣಾಧಿಕಾರಿ ಎ.ಎಸ್. ವಗ್ಗಿ  ತಾಲ್ಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಮಣಿಸಿಂಗ ಚವ್ಹಾಣ, ಗೌರವ ಅಧ್ಯಕ್ಷ ಜಾನ್ ವೆಸ್ಲಿ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.