ಶುಕ್ರವಾರ, ಮೇ 14, 2021
31 °C

ವಿದ್ಯಾರ್ಥಿಗಳಲ್ಲಿ ಕ್ರೀಡಾ ಮನೋಭಾವ ಇರಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಜೇವರ್ಗಿ: ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಮನೋಭಾವನೆ ಹೊಂದಿದಾಗ ಮಾತ್ರ ಜೀವನದಲ್ಲಿನ ಗುರಿ ತಲುಪಲು ಸಾಧ್ಯ. ಆ ನಿಟ್ಟಿನಲ್ಲಿ ಶಿಕ್ಷಕರು, ಪಾಲಕರು ಇನ್ನಷ್ಟು ಶ್ರಮಿಸಬೇಕಾಗಿದೆ ಎಂದು ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ ಅಭಿಪ್ರಾಯಪಟ್ಟರು.



ಅವರು ಮಂಗಳವಾರ ತಾಲ್ಲೂಕಿನ ನರಿಬೋಳ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ಪ್ರೌಢ ಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಆಯೋಜಿಸಿದ್ದ 2011-12ನೇ ಸಾಲಿನ ತಾಲ್ಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.



ನರಿಬೋಳ ಗ್ರಾಮದ ಶವನಿಚ್ಛೆ ಮಠದ ಪೀಠಾಧಿಪತಿ ಶಿವಪುತ್ರಯ್ಯ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ, ಜಿಲ್ಲಾ ಪಂಚಾಯಿತಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಶ್ರೀನಾಥ ಪಿಳ್ಳೆ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ವಿಜಯಲಕ್ಷ್ಮಿ ಆಂದೋಲಾ,



ಭಾರತ ಸೇವಾದಲದ ಜಿಲ್ಲಾ ಸಮಿತಿ ಅಧ್ಯಕ್ಷ ಬಸವಣ್ಣಪ್ಪ ಗೌನಳ್ಳಿ, ತಾಲ್ಲೂಕು ಸಮಿತಿ ಅಧ್ಯಕ್ಷ ರಾಜಶೇಖರ ಸೀರಿ, ರಮೇಶ ವಕೀಲ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಸವರಾಜ ಪಾಟೀಲ ನರಿಬೋಳ, ಸಕ್ರೆಪ್ಪಗೌಡ ಹರನೂರ, ತಿಪ್ಪಣ್ಣ ಬಳಬಟ್ಟಿ, ಮಲ್ಲಿಕಾರ್ಜುನ ಕುಸ್ತಿ, ಡಿ.ಬಿ.ಪಾಟೀಲ   ಕ್ಷೇತ್ರ ಶಿಕ್ಷಣಾಧಿಕಾರಿ ವಿಜಯಕುಮಾರ ಪಾಟೀಲ, ಪ್ರೌಢ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಶಿವಶರಣಪ್ಪ ಸಾಹು ಆಗಮಿಸಿದ್ದರು. 



ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ವಿರೂಪಾಕ್ಷಿ ಹಿರೇಗೌಡ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಗುರುಬಸಪ್ಪ ಚಾಂದಕವಟೆ, ಬಸವರಾಜ ಪಾಟೀಲ, ಚಿನ್ನಪ್ಪಗೌಡ ಪಾಟೀಲ, ಅಮೃತ ಮಾಲಿಪಾಟೀಲ, ದೈಹಿಕ ಶಿಕ್ಷಣಾಧಿಕಾರಿ ಎಸ್.ಎಂ. ಚೌದರಿ ಎಸ್‌ಡಿಎಂಸಿ ಸದಸ್ಯರು, ಪಾಲ್ಗೊಂಡಿದ್ದರು

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.