ನಾರಾಯಣ ಗುರು ಜಯಂತಿ ಆಚರಣೆಗೆ ಮನವಿ

ಸೋಮವಾರ, ಮೇ 20, 2019
30 °C

ನಾರಾಯಣ ಗುರು ಜಯಂತಿ ಆಚರಣೆಗೆ ಮನವಿ

Published:
Updated:

ಗುಲ್ಬರ್ಗ: ಹಿಂದುಳಿದ, ದೀನ ದಲಿತರ ಚಿಂತಕರಾಗಿದ್ದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿಯನ್ನು ಪ್ರತಿವರ್ಷ ಸರ್ಕಾರ ಆಚರಿಸಲು ಕ್ರಮ ಕೈಗೊಳ್ಳಬೇಕು ಎಂದು ಹೈದ್ರಾಬಾದ್ ಕರ್ನಾಟಕ ಆರ್ಯ ಈಡಿಗ ಯುವ ವೇದಿಕೆ ಗುರುವಾರ ಮುಖ್ಯಮಂತ್ರಿಗೆ ಮನವಿ ರವಾನಿಸಿದೆ.ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಬಿ.ಎಸ್. ಯಡಿಯೂರಪ್ಪ ಅವರು ನಾರಾಯಣಗುರು ಜಯಂತಿ ಉತ್ಸವ ದಿನವನ್ನು ರಜಾ ದಿನವೆಂದು ಘೋಷಿಸಿದ್ದಾರೆ.

 

ಆದರೆ ಅದು ಅನುಷ್ಠಾನಕ್ಕೆ ಬಂದಿಲ್ಲ. ಕೇಂದ್ರ ಸರ್ಕಾರ ನಾರಾಯಣಗುರು ಅವರ ಚಿತ್ರವಿರುವ ರೂ. 5ರ ನಾಣ್ಯ ಚಲಾವಣೆಗೆ ತಂದಿದೆ. ಕರ್ನಾಟಕದಲ್ಲಿ ಪ್ರತಿವರ್ಷ ನಾರಾಯಣ ಗುರು ಜಯಂತಿ ಆಚರಿಸುವಂತೆ ಎಲ್ಲ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಬೇಕು ಎಂದು ಮುಖ್ಯಮಂತ್ರಿಯನ್ನು ಕೋರಿದ್ದಾರೆ.ಗುಲ್ಬರ್ಗ ವಿಶ್ವವಿದ್ಯಾಲಯದಲ್ಲಿ ಪ್ರತಿಮೆಯೊಂದನ್ನು ಸ್ಥಾಪಿಸಬೇಕು. ವಿಶೇಷ ಅಧ್ಯಯನ ಪೀಠವೊಂದನ್ನು ಆರಂಭಿಸಬೇಕು ಎಂದು ವೇದಿಕೆಯ ಅಧ್ಯಕ್ಷ ರೇವಣಕುಮಾರ್ ಎ. ರಾವೂರ ಮನವಿಯಲ್ಲಿ ಒತ್ತಾಯಿಸಿದ್ದಾರೆ.ಬಾಳೆ: ವಿಚಾರ ಸಂಕಿರಣ

ಗುಲ್ಬರ್ಗ: ಜಿಲ್ಲಾ ತೋಟಗಾರಿಕೆ ಹುಟ್ಟುವಳಿ ಬೆಳೆಗಾರರ ಸಹಕಾರ ಮಾರಾಟ ಮಂಡಳ ಮತ್ತು ಸಂಸ್ಕರಣ ಸಂಘವು ಬಾಳೆ ಬೆಳೆಯ ಕೋಯ್ಲೋತ್ತರ ನಿರ್ವಹಣೆ ಮತ್ತು ಮಾರುಕಟ್ಟೆ ವ್ಯವಸ್ಥೆ ಕುರಿತು ಇದೇ 26ರಂದು ವಿಚಾರ ಸಂಕಿರಣ ಆಯೋಜಿಸಲು ಉದ್ದೇಶಿಸಿದೆ.ಚಂದ್ರಶೇಖರ್ ಪಾಟೀಲ ಕ್ರೀಡಾಂಗಣ ಹಿಂಭಾಗದಲ್ಲಿರುವ ತೋಟಗಾರಿಕೆ ಸಸ್ಯ ಕ್ಷೇತ್ರದಲ್ಲಿ ವಿಚಾರ ಸಂಕಿರಣ ನಡೆಯಲಿದ್ದು, ರೈತರು ಹೆಚ್ಚಿನ ಪಾಲ್ಗೊಳ್ಳುವಂತೆ ಜಿಲ್ಲಾ ಹಾಪ್‌ಕಾಮ್ಸ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆ ಮೂಲಕ ಕೋರಿದ್ದಾರೆ.ಸಿಎಂಗೆ ಶಿಕ್ಷಕರ ಮನವಿ

ಗುಲ್ಬರ್ಗ: ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ಪಡೆಯುವ ಸಂದರ್ಭದಲ್ಲೆ ವಿದ್ಯಾರ್ಥಿಗಳಿಗೆ ರಾಷ್ಟ್ರೀಕೃತ ಬ್ಯಾಂಕುಗಳಿಂದ ಸಾಲ ವ್ಯವಸ್ಥೆ ಮಾಡಬೇಕು. ವಿವಿಧ ಶಾಲಾ, ಕಾಲೇಜುಗಳಲ್ಲಿ ಒಟ್ಟು 21 ಸಾವಿರ ಶಿಕ್ಷಕ ಹುದ್ದೆಗಳು ಖಾಲಿ ಇದ್ದು, ಕೂಡಲೇ ಭರ್ತಿಗೆ ಕ್ರಮ ಕೈಗೊಳ್ಳಬೇಕು ಎಂದು ಈಶಾನ್ಯ ವಲಯದ ಶಿಕ್ಷಕರ ವೇದಿಕೆ ಈಚೆಗೆ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿತು.ಶಾಲಾ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು ನೆರೆ ರಾಜ್ಯಗಳಿಗಿಂತಲೂ  ಕಡಿಮೆ ಸಂಬಳದಲ್ಲಿ ಕೆಲಸ ಮಾಡುತ್ತಿದ್ದಾರೆ. ಕೂಡಲೇ ಈ ವೇತನ ತಾರತಮ್ಯ ನಿವಾರಣೆಗೆ ಕ್ರಮ ಕೈಗೊಳ್ಳಬೇಕು. ಸ್ವಯಂ ಉದ್ಯೋಗ ಕೈಗೊಳ್ಳಲು ಮುಂದೆ ಬರುವ ವಿದ್ಯಾರ್ಥಿಗಳಿಗೆ ರೂ. 5ರಿಂದ ರೂ. 10 ಲಕ್ಷ ಬಡ್ಡಿರಹಿತ ಸಾಲ ವ್ಯವಸ್ಥೆ ಮಾಡಬೇಕು ಎಂದು ಮನವಿಯಲ್ಲಿ ವೇದಿಕೆಯ ಅಧ್ಯಕ್ಷ ಎಂ.ಬಿ. ಅಂಬಲಗಿ ಕೇಳಿಕೊಂಡಿದ್ದಾರೆ.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry