ಗುರುವಾರ , ಮೇ 19, 2022
20 °C

ಭಾಷಾ ಅಧ್ಯಯನಕ್ಕೆ ಹೆಚ್ಚು ಒತ್ತು ನೀಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಲ್ಬರ್ಗ: ಈಶಾನ್ಯ ವಲಯ ಶಿಕ್ಷಕರ ವೇದಿಕೆಯ ವತಿಯಿಂದ ಪದವಿಪೂರ್ವ ಉಪನ್ಯಾಸಕರ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆಯ `ಕಡ್ಡಾಯ ಕನ್ನಡ~ ವಿಷಯದ ಕುರಿತು ಒಂದು ತಿಂಗಳ ತರಬೇತಿಯು ಭಾನುವಾರ ನಗರದ ಐ.ಎಂ.ಎ.ಸಭಾಂಗಣದಲ್ಲಿ ಆರಂಭಗೊಂಡಿತು.ತರಬೇತಿ ಉದ್ಘಾಟಿಸಿದ ಮಾಜಿ ಸಂಸದ ಬಸವರಾಜ ಪಾಟೀಲ ಸೇಡಂ ಮಾತನಾಡಿ, `ಶೇ. 80ರಷ್ಟು ಸ್ನಾತಕೋತ್ತರ ಪದವೀಧರರು ಉಪನ್ಯಾಸಕರ  ಪರೀಕ್ಷೆಯಲ್ಲಿ ಅನುತ್ತೀರ್ಣ ಹೊಂದುವುದು ಬೇಸರದ ಸಂಗತಿ.    ಅದಕ್ಕಾಗಿ ಭಾಷಾ ಅಧ್ಯಯನಕ್ಕೆ ಹೆಚ್ಚು ಒತ್ತು ನೀಡಬೇಕು. ಪ್ರಾಮಾಣಿಕತೆ, ಶ್ರದ್ಧೆಯಿಂದ ಕಲಿಯಬೇಕು~ ಸಲಹೆ ನೀಡಿದರು.ವೇದಿಕೆ ಕಾರ್ಯಾಧ್ಯಕ್ಷ ಎಂ.ಬಿ.ಅಂಬಲಗಿ ಮಾತನಾಡಿ, ಈ ಭಾಗದ ಆಕಾಂಕ್ಷಿಗಳು ಪರೀಕ್ಷೆಯಲ್ಲಿ ಅನುತ್ತೀರ್ಣ ಹೊಂದುತ್ತಿದ್ದಾರೆ. ಈ ನಿಟ್ಟಿನಲ್ಲಿ ಅವರನ್ನು ಪರೀಕ್ಷೆಗೆ ಸಿದ್ಧಗೊಳಿಸಲು ತರಬೇತಿ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಐಚ್ಛಿಕ ವಿಷಯಗಳ ಬಗ್ಗೆಯೂ ತರಬೇತಿ ನೀಡಲಾಗುವುದು~ ಎಂದರು.ಕೆನರಾ ಬ್ಯಾಂಕ್ ಹಿರಿಯ ಅಧಿಕಾರಿ ಯು.ದಯಾನಂದ ಅಧ್ಯಕ್ಷತೆ ವಹಿಸಿದ್ದರು. ಪ್ರೊ.ಜಯಪ್ರಕಾಶ ಕ್ಷೀರಸಾಗರ, ಶಿವಶರಣಪ್ಪ ಮೋತಕಪಲ್ಲಿ, ಡಾ.ಅಣ್ಣಾರಾವ ಗುಬ್ಬಿ, ಡಾ.ಸುಭಾಷ ಕರಡಗಿ ಮತ್ತಿತರರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.