ನನಗೆ ಕಿರುಕುಳ ನೀಡುತ್ತಿದ್ದಾರೆ: ಡಿ.ಕೆ. ಶಿವಕುಮಾರ್‌

7
ಆದಾಯ ತೆರಿಗೆ ಇಲಾಖೆ ನೋಟಿಸ್‌ಗೆ ಪ್ರತಿಕ್ರಿಯೆ

ನನಗೆ ಕಿರುಕುಳ ನೀಡುತ್ತಿದ್ದಾರೆ: ಡಿ.ಕೆ. ಶಿವಕುಮಾರ್‌

Published:
Updated:
ಡಿ.ಕೆ. ಶಿವಕುಮಾರ್‌

ಬೆಂಗಳೂರು: ‘ನನಗೆ ಸಾಕಷ್ಟು ಕಿರುಕುಳ ನೀಡುತ್ತಿದ್ದಾರೆ. ನನ್ನ ಸಂಬಂಧಿಕರು, ಆಪ್ತರಿಗೂ ಕಿರುಕುಳ ಕೊಡುತ್ತಿದ್ದಾರೆ. ಯಾಕೆ ಇದೆಲ್ಲವನ್ನು ಮಾಡುತ್ತಿದ್ದಾರೆ ಎಂಂಬುದು ಗೊತ್ತಿದೆ’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ. ಶಿವಕುಮಾರ್ ಹೇಳಿದರು.

ಆದಾಯ ತೆರಿಗೆ ಇಲಾಖೆ ನೋಟಿಸ್‌ ಸಂಬಂಧ ನಗರದಲ್ಲಿ ಪ್ರತಿಕ್ರಿಯಿಸಿದ ಅವರು, ‘ಈಗ ವಿಚಾರಣೆಗೆ ಹಾಜರಾಗಿ ಅಂತ ನೊಟೀಸ್ ಬಂದಿದೆ. ಆದರೆ ಯಾವುದೇ ಸಮನ್ಸ್ ಬಂದಿಲ್ಲ. ನಿಮಗೆ ಏನು ಅನಿಸುತ್ತದೋ ಅದನ್ನ ಮಾಡಿ. ಅವರಿಗೆ ಏನು ಅನ್ನಿಸ್ತದೋ ಅವರು ಮಾಡ್ತಾರೆ. ಕೊನೆಗೆ, ದೇಶ, ಕಾನೂನು, ನ್ಯಾಯ ಎಲ್ಲವೂ ಇದೆ. ಕಾನೂನು ಮೂಲಕ ಹೋರಾಟ ಮಾಡೋದು ಗೊತ್ತಿದೆ’ ಎಂದರು.

ಈಗ ಮಾತನಾಡಲ್ಲ, ಸಮಯ ಬಂದಾಗ ಮಾತನಾಡುತ್ತೇನೆ ಎಂದ ಸಚಿವ, ‘ನನ್ನನ್ನೇ ಯಾಕೆ ಟಾರ್ಗೆಟ್ ಮಾಡ್ತಿದ್ದಾರೆ? ಬೇರೆಯವರ ಮನೆಯಲ್ಲಿ ಡೈರಿ, ಲೆಕ್ಕ ಇಟ್ಟಿದ್ದು ಗೊತ್ತಿಲ್ಲವೇ? ಅಂತವರ ಮನೆಗಳು ಮೇಲೆ ಯಾಕೆ ದಾಳಿ ಮಾಡಲ್ಲ?’ ಎಂದು ಪ್ರಶ್ನಿಸಿದರು.

ಬರಹ ಇಷ್ಟವಾಯಿತೆ?

 • 102

  Happy
 • 26

  Amused
 • 13

  Sad
 • 7

  Frustrated
 • 11

  Angry

Comments:

0 comments

Write the first review for this !