ಇದೇ 27 ರಂದು ಕೆಂಪೇಗೌಡ ಜಯಂತಿ: ಡಿ.ಕೆ.ಶಿವಕುಮಾರ್

7
ಅರಮನೆ ಮೈದಾನದಲ್ಲಿ ಕಾರ್ಯಕ್ರಮ

ಇದೇ 27 ರಂದು ಕೆಂಪೇಗೌಡ ಜಯಂತಿ: ಡಿ.ಕೆ.ಶಿವಕುಮಾರ್

Published:
Updated:

ಬೆಂಗಳೂರು: ಇದೇ 27 ರಂದು ನಗರದ ಅರಮನೆ ಮೈದಾನದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಿಸಲಾಗುವುದೆಂದು ಜಲಸಂಪನ್ಮೂಲ ಸಚಿವ ಮತ್ತು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬುಧವಾರ ಕೆಂಪೇಗೌಡರ ಜಯಂತಿ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಅಂದು ಬೆಂಗಳೂರಿನ 5 ಕಡೆಗಳಲ್ಲಿ ಇರುವ ಗೋಪುರಗಳಿಂದ ನಗರದ ಸ್ವಾತಂತ್ರ್ಯ ಉದ್ಯಾನವನಕ್ಕೆ ಮೆರವಣಿಗೆ ನಡೆಸಲು ತೀರ್ಮಾನಿಸಲಾಗಿದೆ ಎಂದರು.

‘ಕೆಂಪೇಗೌಡ ಜಯಂತಿ ಒಂದು ಸಮುದಾಯಕ್ಕೆ ಸೀಮಿತವಾಗದೇ, ಈ ನಾಡಿನ ಎಲ್ಲರ ಜಯಂತಿಯಾಗಿ ರೂಪುಗೊಳ್ಳಬೇಕು. ಈ ಸಂಬಂಧ ಕನ್ನಡ ಪರ ಹೋರಾಟಗಾರರು, ವಿವಿಧ ಸಂಘಟನೆಗಳ ಮುಖ್ಯಸ್ಥರು, ಕಲಾವಿದರು ಹಾಗೂ ಸಾರ್ವಜನಿಕರು ಭಾಗವಹಿಸಬೇಕು’ ಎಂದು ಅವರು ಮನವಿ ಮಾಡಿದರು.

‘ಮುಖ್ಯಮಂತ್ರಿಯವರ ಆದೇಶದ ಅನ್ವಯ ಈ ಪೂರ್ವಭಾವಿ ಸಭೆ ನಡೆಸಿದ್ದು, ಕಾರ್ಯಕ್ರಮಕ್ಕೆ ಸರ್ಕಾರ ₹ 65 ಲಕ್ಷ ಅನುದಾನ ನೀಡಲಿದೆ. ಹೆಚ್ಚಿನ ಅನುದಾನ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತೇನೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಕೆಂಪೇಗೌಡರ ಜಯಂತಿ ಆಚರಣೆ ಮಾಡಲು ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಒಕ್ಕಲಿಗರ ಸಂಘವು ಈ ಕಾರ್ಯಕ್ರಮಕ್ಕಾಗಿ ₹ 50 ಲಕ್ಷ ನೀಡಲಿದೆ’ ಎಂದರು.

ನಗರದ ವಿವಿಧ ಕಡೆ ಕೆಂಪೇಗೌಡರ ಪ್ರತಿಮೆ ಸ್ಥಾಪನೆ, ನಗರದ ವಿಶ್ವವಿದ್ಯಾಲಯವೊಂದಕ್ಕೆ ಕೆಂಪೇಗೌಡರ ಹೆಸರಿಡಬೇಕೆಂಬ ಬೇಡಿಕೆಯನ್ನು ಕಾನೂನಿನ ಚೌಕಟ್ಟಿನಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿಯೂ ಶಿವಕುಮಾರ್‌ ಭರವಸೆ ನೀಡಿದರು.

ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಕಚೇರಿ ಹಾಗೂ ಸಂಶೋಧನಾ ಕೇಂದ್ರಕ್ಕೆ ನಗರದಲ್ಲಿ 5 ಎಕರೆ ಜಮೀನನ್ನು ಕಾಯ್ದಿರಿಸಲಾಗಿದೆ. ನಗರದ ಮೇಯೋಹಾಲ್‍ನಲ್ಲಿ ತಾತ್ಕಾಲಿಕ ಕಚೇರಿಯನ್ನು ಈಗಾಗಲೇ ಪ್ರಾರಂಭಿಸಲಾಗಿದೆ ಎಂದರು. ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವೆ ಜಯಮಾಲಾ, ಬಿಬಿಎಂಪಿ ಮೇಯರ್‌ ಸಂಪತ್‌ರಾಜ್‌, ಕವಿ ದೊಡ್ಡರಂಗೇಗೌಡ ಇದ್ದರು. 
 

 

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 2

  Frustrated
 • 0

  Angry

Comments:

0 comments

Write the first review for this !