ಮರಳು ಸಾಗಣಿಕೆ ನಿಷೇಧಿಸಿ

7
ಡಿ.ಸಿ ಕಚೇರಿ ಎದುರು ಕಿತ್ತಗಳಲೆ ಗ್ರಾಮಸ್ಥರ ಪ್ರತಿಭಟನೆ

ಮರಳು ಸಾಗಣಿಕೆ ನಿಷೇಧಿಸಿ

Published:
Updated:
ಹಾಸನ ಜಿಲ್ಲಾಧಿಕಾರಿ ಕಚೇರಿ ಎದುರು ಆಲೂರು ತಾಲ್ಲೂಕು ಕಿತ್ತಗಳಲೆ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಹಾಸನ: ಆಲೂರು ತಾಲ್ಲೂಕಿನ ಕಿತ್ತಗಳಲೆ, ಕೊಡಗಲವಾಡಿ  ಗ್ರಾಮದ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು, ಮಳೆಗಾಲ ಮುಗಿಯುವವರೆಗೆ ಮರಳು ಸಾಗಾಣಿಕೆ ನಿಷೇಧಿಸಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಗ್ರಾಮಸ್ಥರು ಗುರುವಾರ ಪ್ರತಿಭಟನೆ ನಡೆಸಿದರು.

ಮರಳು ಗಣಿಗಾರಿಕೆಗೆ ಪರವಾನಗಿ ನೀಡಿದ್ದರಿಂದ ನಿತ್ಯ ನೂರಾರು ಲಾರಿಗಳು ಈ ರಸ್ತೆಯಲ್ಲಿ ಸಂಚರಿಸುತ್ತಿವೆ. ಇದರಿಂದ ರಸ್ತೆ ಪೂರ್ತಿ ಗುಂಡಿಮಯವಾಗಿದ್ದು, ಸತತವಾಗಿ ಮಳೆ ಬೀಳುತ್ತಿರುವುದರಿಂದ ದ್ವಿಚಕ್ರ ವಾಹನ ಸವಾರರೂ ಸಂಚರಿಸದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಶಾಲಾ ಮಕ್ಕಳು ಇದೇ ರಸ್ತೆಯಲ್ಲಿ ಹೋಗಬೇಕಿದೆ ಎಂದು ಪ್ರತಿಭಟನಾಕಾರರು ಅಳಲು ತೋಡಿಕೊಂಡರು.

ಗ್ರಾಮದ ಸುತ್ತಲ ಪ್ರದೇಶದಲ್ಲಿ ಕಾಡಾನೆ ಹಾವಳಿ ಹೆಚ್ಚಿದ್ದು, ಮನುಷ್ಯರ ಪ್ರಾಣ ಹಾನಿ ನಿರಂತರವಾಗಿ ನಡೆಯುತ್ತಿದೆ. ಹಿಂಡುಗಟ್ಟಲೇ ಬರುವ ಆನೆಗಳು ಜಮೀನುಗಳ ಮೇಲೆ ದಾಳಿ ನಡೆಸಿ ಅಪಾರ ಪ್ರಮಾಣದ ಬೆಳೆ ನಷ್ಟ ಮಾಡುತ್ತಿವೆ. ಜಿಲ್ಲಾಡಳಿತ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಪರಿಹಾರ ಕಲ್ಪಿಸಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಗೆ ಮನವಿ ಸಲ್ಲಿಸಿದರು.

ಗ್ರಾಮಸ್ಥರಾದ ಯೋಗೇಶ್, ಪ್ರಕಾಶ್, ಸುಬ್ರಹ್ಮಣ್ಯ, ಮರಿಯಣ್ಣ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !