7

ಇಂಗ್ಲೆಂಡ್ ತಂಡಕ್ಕೆ ಮರಳಿದ ಬೆನ್ ಸ್ಟೋಕ್ಸ್

Published:
Updated:
ಬೆನ್ ಸ್ಟೋಕ್ಸ್‌

ಲಂಡನ್ : ಭಾರತದ ಎದುರು ಜುಲೈ 3ರಿಂದ ಆರಂಭವಾಲಿರುವ ಕ್ರಿಕೆಟ್ ಸರಣಿಯಲ್ಲಿ ಆಡುವ ಇಂಗ್ಲೆಂಡ್ ತಂಡಕ್ಕೆ  ಆಲ್‌ರೌಂಡರ್ ಬೆನ್ ಸ್ಟೋಕ್ಸ್‌ ಮರಳಿದ್ದಾರೆ.

ಬೆನ್‌ ಸ್ಟೋಕ್ಸ್‌ ಹೋದ ತಿಂಗಳು ಸ್ನಾಯುಸೆಳೆತದಿಂದಾಗಿ ವಿಶ್ರಾಂತಿ ಪಡೆದಿದ್ದರು. ಆಸ್ಟ್ರೇಲಿಯಾ ಎದುರಿನ ಏಕದಿನ ಕ್ರಿಕೆಟ್ ಸರಣಿಯಲ್ಲಿ ಅವರು ಆಡಿರಲಿಲ್ಲ.  ಇದೀಗ ಫಿಟ್ ಆಗಿರುವ ಅವರು ಭಾರತದ ಎದುರಿನ ಟ್ವೆಂಟಿ–20 ಮತ್ತು ಏಕದಿನ ಸರಣಿಗಳಲ್ಲಿ ಆಡಲಿದೆ. ಶನಿವಾರ ಇಂಗ್ಲೆಂಡ್ ಮತ್ತು ವೇಲ್ಸ್‌ ಕ್ರಿಕೆಟ್ ಸಂಸ್ಥೆಯು ಪ್ರಕಟಿಸಿರುವ ತಂಡದಲ್ಲಿ ಬೆನ್ ಇದ್ದಾರೆ.

ತಂಡ ಇಂತಿದೆ: ಇಯಾನ್ ಮಾರ್ಗನ್ (ನಾಯಕ), ಮೋಯಿನ್ ಅಲಿ, ಜಾನಿ ಬೆಸ್ಟೋ, ಜೇಕ್ ಬಾಲ್, ಜೋಸ್ ಬಟ್ಲರ್, ಟಾಮ್ ಕುರಾನ್, ಅಲೆಕ್ಸ್ ಹೇಲ್ಸ್, ಲಿಯಾಮ್ ಪ್ಲಂಕೆಟ್, ಅದಿಲ್ ರಶೀದ್, ಜೋ ರೂಟ್, ಜೇಸನ್ ರಾಯ್, ಬೆನ್ ಸ್ಟೋಕ್ಸ್, ಡೇವಿಡ್ ವಿಲ್ಲಿ, ಮಾರ್ಕ್ ವುಡ್ 

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !