ಉಚಿತ ಬಸ್ ಪಾಸ್‌ಗಾಗಿ ವಿದ್ಯಾರ್ಥಿಗಳ ಪ್ರತಿಭಟನೆ

7

ಉಚಿತ ಬಸ್ ಪಾಸ್‌ಗಾಗಿ ವಿದ್ಯಾರ್ಥಿಗಳ ಪ್ರತಿಭಟನೆ

Published:
Updated:
ಮುಧೋಳದಲ್ಲಿ ಶುಕ್ರವಾರ ಉಚಿತ ಬಸ್ ಪಾಸ್ ನೀಡಬೇಕು ಎಂದು ಆಗ್ರಹಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಶಿರಸ್ತೇದಾರ ಮಠದ  ಅವರಿಗೆ ಮನವಿ ಸಲ್ಲಿಸಿದರು

ಮುಧೋಳ: ಎಲ್ಲ ವರ್ಗದ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿ ಉಚಿತ ಬಸ್ ಪಾಸ್ ನೀಡುವ ಕುರಿತು ಮುಂಗಡ ಪತ್ರದಲ್ಲಿ ಯಾವುದೇ ಘೋಷಣೆ ಮಾಡದಿರುವುದನ್ನು ಖಂಡಿಸಿ ಹಾಗೂ ಕೂಡಲೇ ಉಚಿತ ಬಸ್ ಪಾಸ್ ಘೋಷಣೆ ಮಾಡಬೇಕು ಎಂದು ಆಗ್ರಹಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಶುಕ್ರವಾರ ಪ್ರತಿಭಟನೆ ನಡೆಸಿ ಶಿರಸ್ತೇದಾರ ಮಠದ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಎಬಿವಿಪಿ ಸಂಚಾಲಕ ಶಿವು ಕಾಂಬಳೆ ಮಾತನಾಡಿ ‘ಶಿಕ್ಷಣ ಇಂದಿನ ದಿನದಲ್ಲಿ ಮಾರಾಟದ ವಸ್ತು ಆಗುತ್ತಿದೆ. ಬಡವರಿಗೆ ಗ್ರಾಮೀಣ ವಿದ್ಯಾರ್ಥಿಗಳಿಗೆ ಶಿಕ್ಷಣ ಪಡೆಯುವುದು ಕಷ್ಟದಾಯಕವಾಗಿದೆ. ಗ್ರಾಮೀಣ ಭಾಗದಿಂದ ಬರುವ ವಿದ್ಯಾರ್ಥಿಗಳಿಗೆ ಕೂಡಲೇ ಉಚಿತ ಬಸ್ ಪಾಸ್ ವಿತರಿಸಬೇಕು. ನಿಗದಿತ ಸಮಯಕ್ಕೆ ಬಸ್ ಓಡಿಸಬೇಕು. ಬಸ್ ಸಂಚಾರ ಇಲ್ಲದ ಗ್ರಾಮಗಳಿಗೂ ಬಸ್ ಸಂಚಾರ ಆರಂಭಿಸಬೇಕು. ಎಸ್‌ಸಿ, ಎಸ್‌ಟಿ ಹಾಸ್ಟೇಲ್ ಉನ್ನತಿಕರಿಸಬೇಕು, ಖಾಲಿ ಇರುವ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯನ್ನು ನೇಮಕ ಮಾಡಬೇಕು’ ಎಂದು ಆಗ್ರಹಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !