ದೀರ್ಘ ರಜೆ; ಜಿಲ್ಲಾಧಿಕಾರಿಗೆ ಬೀಳ್ಕೊಡುಗೆ

7
ಹಂಗಾಮಿ ಜಿಲ್ಲಾಧಿಕಾರಿಯಾಗಿ ಜಿಲ್ಲಾ ಪಂಚಾಯಿತಿ ಸಿಇಒ ಗುರುದತ್ ಹೆಗಡೆ ಅಧಿಕಾರ ಸ್ವೀಕಾರ

ದೀರ್ಘ ರಜೆ; ಜಿಲ್ಲಾಧಿಕಾರಿಗೆ ಬೀಳ್ಕೊಡುಗೆ

Published:
Updated:
ಜಿಲ್ಲಾಧಿಕಾರಿ ದೀಪ್ತಿ ಕಾನಡೆ ಅವರಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎನ್.ಅನುರಾಧಾ ಅವರು ಫಲಪುಷ್ಪ, ಸ್ಮರಣಿಕೆ ನೀಡಿ ಸನ್ಮಾನಿಸಿದರು. ಹಂಗಾಮಿ ಜಿಲ್ಲಾಧಿಕಾರಿ ಗುರುದತ್ ಹೆಗಡೆ, ಉಪ ವಿಭಾಗಾಧಿಕಾರಿ ಶಿವಸ್ವಾಮಿ ಚಿತ್ರದಲ್ಲಿದ್ದಾರೆ.

ಚಿಕ್ಕಬಳ್ಳಾಪುರ: ದೀರ್ಘಾವಧಿ ರಜೆಯ ಮೇಲೆ ತೆರಳುತ್ತಿರುವ ಜಿಲ್ಲಾಧಿಕಾರಿ ದೀಪ್ತಿ ಕಾನಡೆ ಅವರಿಗೆ ಇತ್ತೀಚೆಗೆ ಜಿಲ್ಲಾಡಳಿತದ ವತಿಯಿಂದ ಬೀಳ್ಕೊಡಲಾಯಿತು. ಸದ್ಯ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗುರುದತ್ ಹೆಗಡೆ ಅವರು ಹಂಗಾಮಿ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ (ಐಐಎಸ್‌ಸಿ) ವಿಜ್ಞಾನಿಯಾಗಿರುವ ದೀಪ್ತಿ ಅವರ ಪತಿ ಆದಿತ್ಯ ಅವರು ಉನ್ನತ ವ್ಯಾಸಂಗಕ್ಕಾಗಿ ಅಮೆರಿಕಕ್ಕೆ ತೆರಳುತ್ತಿರುವ ಕಾರಣ ದೀಪ್ತಿ ಅವರು ಸಹ ಒಂದು ವರ್ಷ ರಜೆ ಹಾಕಿ ಕುಟುಂಬದೊಂದಿಗೆ ಅಮೆರಿಕಕ್ಕೆ ತೆರಳುತ್ತಿದ್ದಾರೆ ಎನ್ನಲಾಗಿದೆ.

‘ವಿಧಾನಸಭೆ ಅಧಿವೇಶನ ಮುಗಿಯುತ್ತಿದ್ದಂತೆ ಶೀಘ್ರದಲ್ಲಿಯೇ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿ ಅವರ ನೇಮಕವಾಗಲಿದೆ’ ಎಂದು ಹಂಗಾಮಿ ಜಿಲ್ಲಾಧಿಕಾರಿ ಗುರುದತ್ ಹೆಗಡೆ ತಿಳಿಸಿದರು.  2016ರ ಜೂನ್ 24 ರಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಜಿಲ್ಲಾಧಿಕಾರಿಯಾಗಿದ್ದ ಡಾ.ಎಂ.ವಿ.ವೆಂಕಟೇಶ್‌ ಅವರನ್ನು ಹಾವೇರಿಯ ಜಿಲ್ಲಾಧಿಕಾರಿಯಾಗಿ ವರ್ಗಾಯಿಸಿ, ಹಣಕಾಸು ಇಲಾಖೆ ಉಪ ಕಾರ್ಯದರ್ಶಿಯಾಗಿದ್ದ ದೀಪ್ತಿ ಅವರನ್ನು ಜಿಲ್ಲೆಯ ಜಿಲ್ಲಾಧಿಕಾರಿಯನ್ನಾಗಿ ನೇಮಕ ಮಾಡಿತ್ತು.

ಕಳೆದ ಎರಡು ವರ್ಷಗಳಿಂದ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ ಮಹಾರಾಷ್ಟ್ರ ಮೂಲದ ದೀಪ್ತಿ ಅವರು 2008ನೇ ಬ್ಯಾಚಿನ ಐಎಎಸ್‌ ಅಧಿಕಾರಿಯಾಗಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !