ಬಜೆಟ್‌ನಲ್ಲಿ ಉತ್ತರ ಕರ್ನಾಟಕ ನಿರ್ಲಕ್ಷಿಸಿಲ್ಲ

7
ಆರೋಗ್ಯ ಸಚಿವ ಶಿವಾನಂದ ಪಾಟೀಲ ಅಭಿಮತ

ಬಜೆಟ್‌ನಲ್ಲಿ ಉತ್ತರ ಕರ್ನಾಟಕ ನಿರ್ಲಕ್ಷಿಸಿಲ್ಲ

Published:
Updated:

ಬಾಗಲಕೋಟೆ: ‘ಈ ಹಿಂದೆ ಸಿದ್ದರಾಮಯ್ಯ ಮಂಡಿಸಿದ್ದ ಬಜೆಟ್‌ಗೆ ಪೂರಕವಾಗಿಯೇ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತೊಂದು ಮಂಡಿಸಿದ್ದಾರೆ. ಇದು ಹಳೆಯ ಬಜೆಟ್‌ನ ಮುಂದುವರೆದ ಭಾಗ. ಹಾಗಾಗಿ ಉತ್ತರ ಕರ್ನಾಟಕವನ್ನು ನಿರ್ಲಕ್ಷಿಸಿರುವ ಪ್ರಶ್ನೆಯೇ ಇಲ್ಲ’ ಎಂದು ಆರೋಗ್ಯ ಸಚಿವ ಶಿವಾನಂದ ಪಾಟೀಲ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಜೆಟ್‌ನಲ್ಲಿ ಉತ್ತರ ಕರ್ನಾಟಕವನ್ನು ನಿರ್ಲಕ್ಷಿಸಲಾಗಿದೆ’ ಎಂದು ಕಾಂಗ್ರೆಸ್ ಶಾಸಕ ಎಚ್.ಕೆ.ಪಾಟೀಲ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ‘ಪಾಟೀಲರು ಯಾಕೇ ಆ ರೀತಿ ಹೇಳಿಕೆ ನೀಡಿದ್ದಾರೆ ಎನ್ನುವುದು ಗೊತ್ತಿಲ್ಲ. ಅವರಿಗೆ ಕೇಳಬೇಕು ಎಂದರು.

‘ ಕೃಷ್ಣಾ ಮೇಲ್ದಂಡೆ ಯೋಜನೆಯಲ್ಲಿ ಭೂಮಿ ಕಳೆದುಕೊಳ್ಳುವವರಿಗೆ ಏಕರೂಪದ ದರ ನಿಗದಿ ಮಾಡುವ ಬಗ್ಗೆ ಚರ್ಚಿಸಲಾಗುತ್ತದೆ’ ಎಂದರು.  ‘ರಾಜ್ಯದಲ್ಲಿ ಖಾಲಿ ಇರುವ ವೈದ್ಯರ ಹುದ್ದೆ ಭರ್ತಿಗೆ ಜುಲೈ೧೫ ರಂದು ಕೌನ್ಸೆಲಿಂಗ್ ನಡೆಸಲಾಗುತ್ತಿದೆ. ಬೆಂಗಳೂರು ಬಿಟ್ಟು ಬೇರೆ ಕಡೆ ಕೆಲಸ ಮಾಡಲು ಅನುವು ಮಾಡಿಕೊಡಲಾಗುತ್ತದೆ’ ಎಂದರು.

 

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !