ಮಂಡ್ಯ ಜಿಲ್ಲೆಯ ವಿವಿಧೆಡೆ ಮಳೆ

7

ಮಂಡ್ಯ ಜಿಲ್ಲೆಯ ವಿವಿಧೆಡೆ ಮಳೆ

Published:
Updated:
ಮಂಡ್ಯದಲ್ಲಿ ಮಂಗಳವಾರ ಸುರಿದ ಮಳೆಗೆ ಮೈಸೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನೀರು ನಿಂತಿರುವುದು

ಮಂಡ್ಯ: ಜಿಲ್ಲೆಯ ವಿವಿಧೆಡೆ ಮಂಗಳವಾರ ಮಧ್ಯಾಹ್ನ ಉತ್ತಮ ಮಳೆಯಾಗಿದೆ. ನಗರದಲ್ಲಿ ಬೆಳಿಗ್ಗೆಯಿಂದ ಸಂಜೆಯವರೆಗೂ ಆಗಾಗ ಸೋನೆ ಮಳೆ ಸುರಿಯಿತು.

ಸೈಕ್ಲೋನ್‌ ಮಾದರಿಯಲ್ಲಿ ಮೋಡಮುಚ್ಚಿದ ವಾತಾವರಣ ಎಲ್ಲೆಡೆ ಕಂಡು ಬಂತು. ಜನರು ಚಳಿಯ ವಾತಾವರಣ ಅನುಭವಿಸಿದರು. ಮಕ್ಕಳು ಶಾಲೆಗೆ ತೆರಳುವಾಗ ಸ್ವೆಟರ್‌, ಟೋಪಿ ಧರಿಸಿದ್ದರು. ನಗರದಲ್ಲಿ ಮಧ್ಯಾಹ್ನ 12 ಗಂಟೆಗೆ ಆರಂಭವಾದ ಮಳೆ ಸಂಜೆ 4 ಗಂಟೆಯವರೆಗೂ ಬಿಟ್ಟುಬಿಟ್ಟು ಸುರಿಯಿತು. ಮಳೆಯಿಂದ ರಕ್ಷಿಸಿಕೊಳ್ಳಲು ಜನರು ಕೊಡೆಗಳ ನೆರವು ಪಡೆದರು. ಬೆಂಗಳೂರು–ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನೀರು ಹರಿಯಿತು. ವಿವಿ ರಸ್ತೆ, ಆರ್‌ಪಿ ರಸ್ತೆ, ವಿವೇಕಾನಂದ, ನೂರು ಅಡಿ ರಸ್ತೆ ಗುಂಡಿಗಳಲ್ಲಿ ನೀರು ನಿಂತು ಸಂಚಾರಕ್ಕೆ ಅಡ್ಡಿಯಾಯಿತು.

ಮದ್ದೂರು, ಮಳವಳ್ಳಿ, ಶ್ರೀರಂಗಪಟ್ಟಣ, ಕೆ.ಆರ್‌.ಪೇಟೆ ತಾಲ್ಲೂಕುಗಳಲ್ಲೂ ಮಳೆಯಾಗಿದ್ದು ರೈತರು ಮುಂಗಾರು ಬಿತ್ತನೆ ಕಾರ್ಯದಲ್ಲಿ ತೊಡಗಿದ್ದಾರೆ.

Tags: 

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !