ಬ್ಯಾಂಕ್ ಸಿಬ್ಬಂದಿ ವಿರುದ್ಧ ಆಕ್ರೋಶ

7
ಎಲ್ಲಾ ರಾಷ್ಟ್ರೀಕೃತ ಬ್ಯಾಂಕ್ ಶಾಖೆಗಳಲ್ಲಿ ಗ್ರಾಹಕರೊಂದಿಗೆ ಕನ್ನಡದಲ್ಲಿಯೇ ವ್ಯವಹರಿಸುವಂತೆ ಆಗ್ರಹಿಸಿ ಕರವೇ ಕಾರ್ಯಕರ್ತರ ಪ್ರತಿಭಟನೆ

ಬ್ಯಾಂಕ್ ಸಿಬ್ಬಂದಿ ವಿರುದ್ಧ ಆಕ್ರೋಶ

Published:
Updated:
ತಾಲ್ಲೂಕು ಕಚೇರಿ ಎದುರು ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಬಾಗೇಪಲ್ಲಿ: ಪಟ್ಟಣದ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆಯನ್ನು ಬಳಸಬೇಕು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ಮುಖಂಡರು, ಕಾರ್ಯಕರ್ತರು ತಾಲ್ಲೂಕು ಕಚೇರಿ ಮುಂದೆ ಮಂಗಳವಾರ ಪ್ರತಿಭಟನೆ ನಡೆಸಿದರು.

ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಬ್ಯಾಂಕ್ ಅಧಿಕಾರಿಗಳು, ಸಿಬ್ಬಂದಿ ವಿರುದ್ಧ ಧಿಕ್ಕಾರಗಳನ್ನು ಕೂಗಿದರು.

ಕರವೇ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಎನ್.ಹರೀಶ್ ಮಾತನಾಡಿ, ‘ಪಟ್ಟಣದಲ್ಲಿರುವ ಎಲ್ಲಾ ರಾಷ್ಟ್ರೀಕೃತ ಬ್ಯಾಂಕ್‌ ಶಾಖೆಗಳ ವ್ಯವಸ್ಥಾಪಕರು ಸೇರಿದಂತೆ ಎಲ್ಲಾ ಸಿಬ್ಬಂದಿ ಕನ್ನಡ ವಿರೋಧಿ ಧೋರಣೆ ತೋರುತ್ತಿದ್ದಾರೆ. ಗ್ರಾಹಕರೊಂದಿಗೆ ಕೇವಲ ಹಿಂದಿ, ಇಂಗ್ಲಿಷ್‌ನಲ್ಲಿ ವ್ಯವಹರಿಸುತ್ತ ಕನ್ನಡ ಮಾತನಾಡುವವರನ್ನು ಕೀಳಾಗಿ ಕಾಣುತ್ತಿದ್ದಾರೆ’ ಎಂದು ಆರೋಪಿಸಿದರು.

‘ಗ್ರಾಮೀಣ ಭಾಗದ ಜನರು, ಕೂಲಿ ಕಾರ್ಮಿಕರಿಗೆ ಹಿಂದಿ, ಇಂಗ್ಲಿಷ್‌ನಲ್ಲಿ ವ್ಯವಹರಿಸಲು ಬರದೆ ತೀವ್ರ ತೊಂದರೆ ಅನುಸರಿಸುತ್ತಿದ್ದಾರೆ. ರಾಜ್ಯದಲ್ಲಿ ಕೆಲಸಕ್ಕೆ ಸೇರಿದ ಆರು ತಿಂಗಳ ಒಳಗೆ ಸ್ಥಳೀಯ ಭಾಷೆ ಕಲಿಯಬೇಕು ಎಂಬ ಸ್ಪಷ್ಟ ನಿರ್ದೇಶನವಿದ್ದರೂ ಅಧಿಕಾರಿಗಳು ಎಚ್ಚೆತ್ತುಕೊಂಡಿಲ್ಲ. ಬದಲು ಕನ್ನಡ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಕನ್ನಡ ಕಲಿಯದವರನ್ನು ಕೆಲಸದಿಂದ ವಜಾಗೊಳಿಸಬೇಕು. ಇಲ್ಲದಿದ್ದರೆ ಕಾಲಮಿತಿಯೊಳಗೆ ಕನ್ನಡ ಕಲಿಯುವಂತೆ ನೋಡಿಕೊಳ್ಳಬೇಕು. ಇಲ್ಲದೆ ಹೋದರೆ ಮುಂದಿನ ದಿನಗಳ ಬ್ಯಾಂಕ್ ಅಧಿಕಾರಿಗಳು, ಸಿಬ್ಬಂದಿ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಲಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

ಗ್ರೇಡ್- 2 ತಹಶೀಲ್ದಾರ್ ನಾಗರಾಜ್ ಅವರಿಗೆ ಪ್ರತಿಭಟನಾಕಾರರು ಮನವಿ ಸಲ್ಲಿಸಿದರು. ಕರವೇ ಜಿಲ್ಲಾ ಘಟಕದ ಉಪಾಧ್ಯಕ್ಷ ರಾಮರೆಡ್ಡಿ, ಕಾರ್ಯದರ್ಶಿ ಮಂಜು, ಸಂಚಾಲಕ ಶೇಖರಾಚಾರಿ, ಮಹಿಳಾ ಅಧ್ಯಕ್ಷೆ ಸುಜಾತಮ್ಮ, ಪ್ರಧಾನ ಕಾರ್ಯದರ್ಶಿ ರಿಯಾಜುಲ್ಲಾ, ಅಧ್ಯಕ್ಷೆ ಶಾಂತಮ್ಮ , ವಿದ್ಯಾರ್ಥಿ ಘಟಕದ ಅನಿಲ್, ರಸ್ತೆ ಬದಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ನಾರಾಯಣಸ್ವಾಮಿ, ಚಾಲಕರ ಘಟಕ ಅಧ್ಯಕ್ಷ ಪ್ರಭಾಕರ, ಷಾಹೀನಾ, ಕಲ್ಪನಾ, ರೇಷ್ಮಾ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !