ಹತ್ಯೆ ಖಂಡಿಸಿ ವಕೀಲರು ಪ್ರತಿಭಟನೆ

7

ಹತ್ಯೆ ಖಂಡಿಸಿ ವಕೀಲರು ಪ್ರತಿಭಟನೆ

Published:
Updated:
Deccan Herald

ಚಿಕ್ಕಬಳ್ಳಾಪುರ: ದಾಂಡೇಲಿಯ ವಕೀಲ ಅಜಿತ್ ನಾಯಕ ಹತ್ಯೆ ಖಂಡಿಸಿ ಚಿಕ್ಕಬಳ್ಳಾಪುರದಲ್ಲಿ ವಕೀಲರು ಸೋಮವಾರ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಪ್ರಧಾನ ಕಾರ್ಯದರ್ಶಿ ವಿ.ವಿನೋದ್ ಕುಮಾರ್, ‘ಅಜಿತ್‌ ನಾಯಕ್‌ ಹತ್ಯೆಯಿಂದ ವಕೀಲ ಸಮೂಹದಲ್ಲಿ ರಕ್ಷಣೆ ಭೀತಿ ಶುರುವಾಗಿದೆ. ಹತ್ಯೆ ನಡೆಸಿದ ಆರೋಪಿಗಳನ್ನು ಬಂಧಿಸಿ, ಶಿಕ್ಷೆ ವಿಧಿಸಬೇಕು’ ಎಂದು ಒತ್ತಾಯಿಸಿದರು.

ಇತ್ತೀಚೆಗೆ ರಾಜ್ಯದಲ್ಲಿ ವಕೀಲರ ಮೇಲೆ ಹಲ್ಲೆ ಮತ್ತು ಹತ್ಯೆ ಪ್ರಕರಣಗಳು ಪುನರಾವರ್ತನೆ ಆಗುತ್ತಿದ್ದರೂ ನಿಯಂತ್ರಣ ಸಾಧ್ಯವಾಗುತ್ತಿಲ್ಲ. ಈ ನಿಟ್ಟಿನಲ್ಲಿ ಸರ್ಕಾರ ರಕ್ಷಣಾ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ವಕೀಲ ಸಂಘದ ಅಧ್ಯಕ್ಷ ಕೆ.ಎಚ್. ತಮ್ಮೇಗೌಡ, ಉಪಾಧ್ಯಕ್ಷ ಕೆ.ವಿ.ಬಾಲಾಜಿ, ಖಜಾಂಚಿ ನವೀನ್‌ ಕುಮಾರ್, ಎಚ್.ವಿ.ನಾರಾಯಣಪ್ಪ, ಕೃಷ್ಣ, ಮಿಥಿಲೇಶ್ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !