ಎರಡು ಪ್ರಕರಣ: 3 ಆರೋಪಿಗಳಿಗೆ ಶಿಕ್ಷೆ

7

ಎರಡು ಪ್ರಕರಣ: 3 ಆರೋಪಿಗಳಿಗೆ ಶಿಕ್ಷೆ

Published:
Updated:

ಕೋಲಾರ: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ಆರೋಪಿಗಳಿಗೆ ಎರಡನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಶನಿವಾರ ತಲಾ 3 ವರ್ಷ ಕಾರಾಗೃಹ ಶಿಕ್ಷೆ ಹಾಗೂ ತಲಾ ₹ 5 ಸಾವಿರ ದಂಡ ವಿಧಿಸಿದೆ.

ತಾಲ್ಲೂಕಿನ ಚಲ್ದಿಗಾನಹಳ್ಳಿ ಗ್ರಾಮದ ಅಪ್ರಾಪ್ತ ಬಾಲಕಿ ಮನೆಯಲ್ಲಿದ್ದಾಗ 2016ರ ಜು.28ರಂದು ಬೆಳಿಗ್ಗೆ 11 ಗಂಟೆ ಸಮಯದಲ್ಲಿ ಬಾಗಿಲು ಕರೇನಹಳ್ಳಿ ಗ್ರಾಮದ ಬಚ್ಚಪ್ಪ, ಬಾಲಕಿಗೆ ಬಟನ್‌ಚಾಕು ತೋರಿಸಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದನು.

ಅಲ್ಲದೆ ಟಾಟಾಏಸ್ ವಾಹನದಲ್ಲಿ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿಕೊಂಡು ಬೆಂಗಳೂರಿನ ಸಾದಪನಹಳ್ಳಿ ಮತ್ತು ಆನೇಕಲ್ ತಾಲ್ಲೂಕಿನ ಜಿಗಣಿ ಬಳಿ ಕೊಠಡಿಗಳನ್ನು ಮಾಡಿಕೊಂಡಿದ್ದು, ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ವೇಮಗಲ್ ಠಾಣೆಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿತ್ತು.

ಪ್ರಕರಣ ದಾಖಲಿಸಿಕೊಂಡಿದ್ದ ಪಿಎಸ್‍ಐ ಲಕ್ಷ್ಮಿನಾರಾಯಣ ಬಾಲಕಿ ಹಾಗೂ ಆರೋಪಿಯನ್ನು ಪತ್ತೆ ಮಾಡಿ, ವಿಚಾರಣೆ ಮಾಡಿ ಹೆಚ್ಚಿನ ತನಿಖೆಗಾಗಿ ಅಂದಿನ ಸಿಪಿಐ ಎ.ಬಿ.ಸುಧಾಕರ್‌ರೆಡ್ಡಿಗೆ ಅವರಿಗೆ ನೀಡಿದ್ದರು.

ತನಿಖೆ ನಡೆಸಿದ್ದ ಸಿಪಿಐ ಆರೋಪಿತನ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದು, ಬಾಲಕಿಯ ಅಪಹರಣ ಆರೋಪ ಸಾಭೀತಾದ ಹಿನ್ನೆಲೆಯಲ್ಲಿ 2ನೇ ಜಿಲ್ಲಾ ಮತ್ತು ಸತ್ರನ್ಯಾಯಾಧೀಶರಾದ ಬಿ.ಎಸ್.ರೇಖಾ ಆರೋಪಿ ಬಚ್ಚಪ್ಪಗೆ 3 ವರ್ಷ ಕಾರಾಗೃಹ ಶಿಕ್ಷೆ, ₹ 5 ಸಾವಿರ ದಂಡ ವಿಧಿಸಿದ್ದಾರೆ.

ಲೈಂಗಿಕ ಹಲ್ಲೆಗೆ ಪ್ರಯತ್ನ: ತಾಲ್ಲೂಕಿನ ಮದನಹಳ್ಳಿ ಗ್ರಾಮದ ಅಪ್ರಾಪ್ತ ಬಾಲಕಿಯು 2017ರ ಜ.3ರಂದು, ಬೆಳಿಗ್ಗೆ 8 ಗಂಟೆ ಸಮಯದಲ್ಲಿ ಶಾಲೆಗೆ ನಡೆದುಕೊಂಡು ಹೋಗುತ್ತಿದ್ದಾಗ ಅದೇ ಗ್ರಾಮದ ಮಂಜುನಾಥ್, ಲಕ್ಷ್ಮಿನಾರಾಯಣ ಎಂಬುವರು ದ್ವಿಚಕ್ರ ವಾಹನದಲ್ಲಿ ತೆರಳಿ ಆಕೆಯನ್ನು ಅಡ್ಡಗಟ್ಟಿ ಲೈಂಗಿಕ ಹಲ್ಲೆ ನಡೆಸಲು ಪ್ರಯತ್ನಿಸಿದ್ದರು.

ಆಗ ಆಕೆ ಕಿರುಚಿಕೊಂಡಿದ್ದು, ಪಕ್ಕದಲ್ಲಿಯೇ ಕೆಲಸ ಮಾಡುತ್ತಿದ್ದ ಅದೇ ಗ್ರಾಮದ ಮುನಿರೆಡ್ಡಿ ಎಂಬಾತ ಬಾಲಕಿಯ ನೆರವಿಗೆ ಧಾವಿಸಿದ್ದು, ಆತನನ್ನು ನೋಡಿ ಅಪ್ರಾಪ್ತಳನ್ನು ಬಿಟ್ಟು, ಆರೋಪಿತರಿಬ್ಬರು ಪರಾರಿಯಾಗಿದ್ದರು ಎಂದು ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆ ಪಿಎಸ್‍ಐ ಪ್ರಕರಣ ದಾಖಲಿಸಿಕೊಂಡಿದ್ದರು.

ಆರೋಪಿತರ ವಿರುದ್ಧ ತನಿಖೆ ನಡೆಸಿ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಆರೋಪ ಸಾಭೀತಾದ ಹಿನ್ನೆಲೆಯಲ್ಲಿ 2ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಎಸ್.ರೇಖಾ ಆರೋಪಿಗಳಾದ ಮಂಜುನಾಥ್, ಲಕ್ಷ್ಮಿನಾರಾಯಣರಿಗೆ ತಲಾ 3 ವರ್ಷ ಕಾರಾಗೃಹ ಶಿಕ್ಷೆ ಹಾಗೂ ತಲಾ ₹ 5 ಸಾವಿರ ದಂಡ ವಿಧಿಸಿದ್ದಾರೆ.

ಎರಡೂ ಪ್ರಕರಣಗಳಲ್ಲಿ ಸರ್ಕಾರದ ಪರ ವಿಶೇಷ ಸರ್ಕಾರಿ ಅಭಿಯೋಜಕ ಎಸ್.ಮುನಿಸ್ವಾಮಿಗೌಡ ವಾದ ಮಂಡಿಸಿದ್ದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !