ಆ.15ಕ್ಕೆ ಸ್ವಾತಂತ್ರ್ಯ ದಿನಾಚರಣೆ: ಸಿದ್ದತೆಗೆ ಸೂಚನೆ

7

ಆ.15ಕ್ಕೆ ಸ್ವಾತಂತ್ರ್ಯ ದಿನಾಚರಣೆ: ಸಿದ್ದತೆಗೆ ಸೂಚನೆ

Published:
Updated:
Deccan Herald

ಕೋಲಾರ: ‘ಪ್ರತಿ ವರ್ಷದಂತೆ ಈ ಬಾರಿಯೂ ಆ.15ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲು ಅಧಿಕಾರಿಗಳು ಸಿದ್ಧತೆ ಕೈಗೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್ ಸೂಚನೆ ನೀಡಿದರು.

ಸ್ವಾತಂತ್ರ್ಯ ದಿನಾಚರಣೆ ಸಿದ್ಧತೆ ಕುರಿತು ನಗರದಲ್ಲಿ ಶನಿವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ‘ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಜತೆಗೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ರಾಷ್ಟ್ರೀಯ ಹಬ್ಬಕ್ಕೆ ಗೌರವ ಸಲ್ಲಿಸಬೇಕು’ ಎಂದು ಮನವಿ ಮಾಡಿದರು.

‘ಪ್ರತಿ ಇಲಾಖೆ ಕಚೇರಿಗಳ ಮೇಲೆ ರಾಷ್ಟ್ರಧ್ವಜ ಹಾರಿಸಬೇಕು ಮತ್ತು ಸಮರ್ಪಕ ರೀತಿಯಲ್ಲಿ ಕಾರ್ಯಕ್ರಮ ನಡೆಸಬೇಕು. ಅಧಿಕಾರಿಗಳು ಒತ್ತಡಕ್ಕೆ ಮಣಿದು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬಾರದು. ಸ್ವಯಂ ಪ್ರೇರಿತರಾಗಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ಸಿಗೆ ಸಹಕರಿಸಬೇಕು’ ಎಂದು ಹೇಳಿದರು.

ಪ್ಲಾಸ್ಟಿಕ್ ಧ್ವಜ ನಿಷೇಧ: ಪ್ಲಾಸ್ಟಿಕ್ ರಾಷ್ಟ್ರಧ್ವಜಗಳ ಮಾರಾಟಕ್ಕೆ ಅವಕಾಶ ನೀಡಬಾರದು. ಒಂದು ವೇಳೆ ಮಾರಾಟ ಕಂಡುಬಂದಲ್ಲಿ ನಗರಸಭೆಯವರು ಕ್ರಮ ಕೈಗೊಳ್ಳಬೇಕು. ಕ್ರೀಡಾಂಗಣಕ್ಕೆ ನೀರಿನ ವ್ಯವಸ್ಥೆಯನ್ನು ನಗರಸಭೆ ಮಾಡಬೇಕು’ ಎಂದು ತಿಳಿಸಿದರು.

‘ಕೋಚಿಮುಲ್ ವತಿಯಿಂದ ವಿದ್ಯಾರ್ಥಿಗಳಿಗೆ ಪ್ರತಿ ವರ್ಷದಂತೆ ಮಜ್ಜಿಗೆ ಮತ್ತು ಸಿಹಿ ಹಂಚಿಕೆ ಮಾಡಬೇಕು. ಬಸ್‌ ನಿಲ್ದಾಣದಿಂದ ಕಾರ್ಯಕ್ರಮದ ವೇದಿಕೆಯ ಬಳಿಗೆ ಮಕ್ಕಳನ್ನು ಕರೆದುಕೊಂಡು ಹೋಗಲು ಕೆಎಸ್‌ಆರ್‌ಟಿಸಿಯಿಂದ ಬಸ್‌ ವ್ಯವಸ್ಥೆ ಕಲ್ಪಿಸಬೇಕು’ ಎಂದು ಸೂಚಿಸಿದರು.

‘ಹಸಿರು ಕರ್ನಾಟಕ ಕಾರ್ಯಕ್ರಮಕ್ಕೆ ಚಾಲನೆ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪರಿಸರ ಸ್ನೇಹಿ ನೃತ್ಯ ಏರ್ಪಡಿಸಬೇಕು’ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಚಕ್ರಪಾಣಿ ಕೋರಿದರು.

‘ಜಿಲ್ಲಾ ಕ್ರೀಡಾಂಗಣದಲ್ಲಿ ಹಾಗೂ ಟಿ.ಚನ್ನಯ್ಯ ರಂಗಮಂದಿರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ರಾಷ್ಟ್ರಗೀತೆ ಹಾಗೂ ರೈತಗೀತೆ ಹಾಡಲಿದ್ದು, ಈಗಾಗಲೇ ಸಿದ್ಧತೆ ನಡೆಸಿದ್ದಾರೆ’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ (ಪ್ರಭಾರ) ಜಯರಾಜ್‌ ಮಾಹಿತಿ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರೋಹಿಣಿ ಕಟೋಚ್ ಸಫೇಟ್, ಕೆಜಿಎಫ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್‌ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ವಿದ್ಯಾಕುಮಾರಿ ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !